
ನವದೆಹಲಿ: ಸೋಮವಾರ ನಡೆದ ಸುದೀರ್ಘ ಆರು ಗಂಟೆಗಳ ಚರ್ಚೆಯ ಬಳಿಕ ಲೋಕಸಭೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆ 2019 ಅನ್ನು ಅನುಮೋದಿಸಲಾಗಿದೆ. 311 ಮತಗಳು ಮಸೂದೆಯ ಪರವಾಗಿ ಬಿದ್ದರೆ, 80 ಮತಗಳು ಮಸೂದೆಯ ವಿರುದ್ಧವಾಗಿ ಬಿದ್ದಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಸೂದೆ ಅನುಮೋದನೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದು, ಅತ್ಯಂತ ಸಮೃದ್ಧ ಮತ್ತು ಸಕ್ರಿಯ ಚರ್ಚೆಯ ಬಳಿಕ ಮಸೂದೆ ಅನುಮೋದನೆಗೊಂಡಿರುವುದಕ್ಕೆ ಸಂತೋಷವಾಗುತ್ತಿದೆ ಎಂದಿದ್ದಾರೆ.
“ಅತ್ಯಂತ ಸಮೃದ್ಧ ಮತ್ತು ಸಕ್ರಿಯ ಚರ್ಚೆಯ ಬಳಿಕ ಪೌರತ್ವ (ತಿದ್ದುಪಡಿ) ಮಸೂದೆ 2019 ಅನ್ನು ಲೋಕಸಭೆ ಅನುಮೋದಿಸಿರುವುದಕ್ಕೆ ಸಂತೋಷವಾಗುತ್ತಿದೆ. ಇದಕ್ಕಾಗಿ ನಾನು ಮಸೂದೆಯನ್ನು ಬೆಂಬಲಿಸಿದ ಸಂಸದರಿಗೆ ಮತ್ತು ಪಕ್ಷಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಮಸೂದೆಯು ಭಾರತದ ಶತಮಾನಗಳಷ್ಟು ಹಳೆಯ ಮೌಲ್ಯವಾದ ಮಾನವೀಯತೆಯ ಸಂಕೇತವಾಗಿದೆ” ಎಂದಿದ್ದಾರೆ.
Delighted that the Lok Sabha has passed the Citizenship (Amendment) Bill, 2019 after a rich and extensive debate. I thank the various MPs and parties that supported the Bill. This Bill is in line with India’s centuries old ethos of assimilation and belief in humanitarian values.
— Narendra Modi (@narendramodi) December 9, 2019
ಮಸೂದೆ ಬಗ್ಗೆ ನಡೆದ ಚರ್ಚೆಯ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಅವರು, ಈ ಮಸೂದೆಯು ಭಾರತೀಯ ಜನತಾ ಪಾರ್ಟಿಯ ಪ್ರಣಾಳಿಕೆಯ ಭಾಗವಾಗಿತ್ತು. ಈ ಮಸೂದೆಯು ಪ್ರತಿಪಕ್ಷಗಳು ಆರೋಪಿಸಿದಂತೆ ಯಾವುದೇ ಅಲ್ಪಸಂಖ್ಯಾತ ಸಮುದಾಯದ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


