ನವದೆಹಲಿ: ಮಧ್ಯಪ್ರದೇಶದ ವ್ಯಾಪಮ್ ಹಗರಣ ಮತ್ತು ಅದಕ್ಕೆ ಸಂಬಂಧಿಸಿದ 46 ಸಾವುಗಳ ಬಗೆಗಿನ ತನಿಖೆಯನ್ನು ಸೋಮವಾರ ಸಿಬಿಐ ಆರಂಭಿಸಿದೆ.
40 ಸಿಬಿಐ ಸದಸ್ಯರ ತಂಡ ಮಧ್ಯಪ್ರದೇಶ ರಾಜಧಾನಿ ಭೋಪಾಲ್ಗೆ ಆಗಮಿಸಿದ್ದು, ವ್ಯಾಪಮ್ಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಗಳನ್ನೂ ಪರಿಶೀಲನೆ ನಡೆಸುತ್ತಿದೆ. ಸುಪ್ರೀಂಕೋಟ್ನ ನಿರ್ದೇಶನದಂತೆ ಸಿಬಿಐ ತನಿಖೆಯನ್ನು ನಡೆಸಲಿದೆ.
ಇತ್ತೀಚಿಗಷ್ಟೇ ವ್ಯಾಪಮ್ ಹಗರಣ ಮತ್ತು ಅದಕ್ಕೆ ಸಂಬಂಧಿಸಿದ ಸಾವುಗಳ ತನಿಖೆಯನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿತ್ತು. ಇಲ್ಲಿಯವರೆಗೆ ವ್ಯಾಪಮ್ ತನಿಖೆಯನ್ನು ನಡೆಸುತ್ತಿದ್ದ ಸ್ಪೆಷಲ್ ಟಾಸ್ಕ್ ಫೋರ್ಸ್ ಸಿಬಿಐಗೆ 2 ಟನ್ಗಳಷ್ಟು ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಲಿದೆ ಎಂದು ಹೇಳಲಾಗಿದೆ.
ಇಲ್ಲಿಯವರೆಗೆ ಈ ಹಗರಣದ ಸಂಬಂಧ 2,100 ಜನರನ್ನು ಬಂಧಿಸಲಾಗಿದೆ ಮತ್ತು 491 ಮಂದಿ ತಲೆಮರೆಸಿಕೊಂಡಿದ್ದಾರೆ.
ಈ ಹಗರಣಕ್ಕೆ ಸಂಬಂಧಿಸಿದ 46 ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು ಈ ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸಿತ್ತು. ದೇಶ ಕಂಡ ಅತೀ ಕೊಲೆಪಾತಕ ಹಗರಣ ಎಂದೆಂದು ಹೇಳಲಾಗಿದೆ. ಸಿಬಿಐ ತನಿಖೆಯ ಬಳಿಕವಾದರು ಇದರ ಸತ್ಯಾಸತ್ಯತೆ ಹೊರಬರಲಿ ಎಂಬುದು ಸಾರ್ವಜನಿಕರ ಆಶಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.