ನವದೆಹಲಿ: ಮುಂದಿನ ಎರಡು ವರ್ಷಗಳ ಕಾಲ ದೇಶದಲ್ಲಿ ಆರ್ಥಿಕತೆಯನ್ನು ಪ್ರಗತಿಯತ್ತ ಕೊಂಡೊಯ್ಯುವ ಸಲುವಾಗಿ ಮತ್ತು ಉದ್ಯೋಗವನ್ನು ಸೃಷ್ಟಿಸುವ ಸಲುವಾಗಿ 5 ಲಕ್ಷ ಕೋಟಿ ರೂಪಾಯಿಗಳನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
“ಈ ಹಣಕಾಸು ವರ್ಷದಲ್ಲಿ ನಾವು ಮೂಲಸೌಕರ್ಯ ಯೋಜನೆಗಳ ಮೇಲೆ 2 ಲಕ್ಷ ಕೋಟಿ ರೂಪಾಯಿಗಳನ್ನು ವ್ಯಯಿಸಲಿದ್ದೇವೆ. 2020-21ರ ಹಣಕಾಸು ವರ್ಷದಲ್ಲಿ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಸಲುವಾಗಿ 3 ಲಕ್ಷ ಕೋಟಿ ರೂಪಾಯಿಗಳನ್ನು ವ್ಯಯಿಸಲಿದ್ದೇವೆ” ಇಂದು ಬೆಂಗಳೂರಿನಲ್ಲಿ ನಿತಿನ್ ಗಡ್ಕರಿ ಹೇಳಿದ್ದಾರೆ.
ಮೂಲಸೌಕರ್ಯ ವಲಯದಲ್ಲಿ ಅನುದಾನಕ್ಕೆ ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶದಾದ್ಯಂತದ ಹೆದ್ದಾರಿಗಳಲ್ಲಿ ಪೆಟ್ರೋಲ್ ಫಲ್ಲಿಂಗ್ ಸ್ಟೇಷನ್, ಲಾಜಿಸ್ಟಿಕ್ಸ್ ಪಾರ್ಕ್, ಬಸ್ ವೇ ಮತ್ತು ಪಾರ್ಕಿಂಗ್ ಪ್ಲಾಜಾಗಳನ್ನು ನಿರ್ಮಾಣ ಮಾಡಲು ಭೂಮಿ ಲೀಸ್ ನೀಡಲಿದೆ. ಇದರಿಂದ ಸಾರಿಗೆ ವಲಯದಲ್ಲಿ ವಾರ್ಷಿಕ 30 ಸಾವಿರ ಕೋಟಿ ರೂಪಾಯಿ ಆದಾಯ ಸೃಷ್ಟಿಯಾಗಲಿದೆ ಎಂದಿದ್ದಾರೆ.
ಕಡಿಮೆ ವೆಚ್ಚದಲ್ಲಿ ವಿಶ್ವದರ್ಜೆಯ ರಸ್ತೆ ಮತ್ತು ಹೆದ್ದಾರಿಗಳನ್ನು ದೇಶವ್ಯಾಪಿಯಾಗಿ ನಿರ್ಮಿಸುವ ಸಲುವಾಗಿ ಐಟಿ ಎಂಜಿನಿಯರ್ ಗಳಿಗೆ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವಂತೆ ಆಹ್ವಾನವನ್ನು ನೀಡಿದ್ದೇನೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.