ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೌರತ್ವ (ತಿದ್ದುಪಡಿ) ಮಸೂದೆ 2019 ರಾಷ್ಟ್ರಪತಿಗಳ ಅಂಕಿತವನ್ನು ಪಡೆದುಕೊಂಡಿದೆ. ಈ ಮೂಲಕ ಮಸೂದೆಯು ಕಾಯ್ದೆಯಾಗಿ ಪರಿವರ್ತನೆಗೊಂಡಿದೆ.
ಈ ಕಾಯ್ದೆಯು ಬಾಂಗ್ಲಾದೇಶ, ಅಫ್ಘಾನಿಸ್ಥಾನ ಮತ್ತು ಪಾಕಿಸ್ಥಾನದ ಧಾರ್ಮಿಕ ಕಿರುಕುಳ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಧರ್ಮೀಯರಿಗೆ ಭಾರತದ ಪೌರತ್ವವನ್ನು ಒದಗಿಸಲಿದೆ.
ಗುರುವಾರ ಕೇಂದ್ರ ಸರ್ಕಾರವು ಗೆಜೆಟ್ ಅಧಿಸೂಚನೆಯ ಮೂಲಕ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲಿದೆ ಎಂದು ಮೂಲಗಳು ತಿಳಿಸಿವೆ.
ಈ ಕಾಯ್ದೆಯು ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶದ ನಿರಾಶ್ರಿತ ಸಿಖ್, ಹಿಂದೂ, ಜೈನ, ಬೌದ್ಧ, ಪಾರ್ಸಿ ಧರ್ಮಿಯರಿಗೆ ಭಾರತದ ಪೌರತ್ವವನ್ನು ನೀಡಲಿದೆ. ಈಗಾಗಲೇ ಭಾರತದಲ್ಲಿ ವಾಸಿಸುತ್ತಿರುವ ಇವರನ್ನು ಅಕ್ರಮ ವಲಸಿಗರು ಎಂಬ ಹಣೆಪಟ್ಟಿಯಿಂದ ದೂರ ಮಾಡಲಿದೆ.
ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಈ ಮಸೂದೆ ಅನುಮೋದನೆಯನ್ನು ಪಡೆದಿದೆ. ಬಳಿಕ ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಿಕೊಡಲಾಗಿತ್ತು. ಇದೀಗ ರಾಷ್ಟ್ರಪತಿಗಳು ಮಸೂದೆಗೆ ಅಂಕಿತ ಮತ್ತು ಹಾಕಿದ್ದು ಈ ಮೂಲಕ ಅದು ಕಾಯ್ದೆಯಾಗಿ ಪರಿವರ್ತನೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.