ಲಕ್ನೋ: ಐತಿಹಾಸಿಕ ನಗರ ಅಯೋಧ್ಯದಲ್ಲಿ ಬೃಹತ್ ದೇಗುಲದ ನಿರ್ಮಾಣ ಮಾಡುವ ಸಲುವಾಗಿ ಪ್ರತಿಯೊಂದು ಕುಟುಂಬಗಳು ಹನ್ನೊಂದು ರೂಪಾಯಿ ಮತ್ತು ಕಲ್ಲನ್ನು ಕೊಡುಗೆಯಾಗಿ ನೀಡಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮನವಿ ಮಾಡಿಕೊಂಡಿದ್ದಾರೆ.
ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಗಳು ಅಯೋಧ್ಯದಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಪ್ರಚಾರ ನಡೆಸಿದ ಸಂದರ್ಭದಲ್ಲಿ ಅವರು ಈ ಮನವಿಯನ್ನು ಮಾಡಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನಗಳ ಫಲವಾಗಿ 500 ವರ್ಷಗಳ ವಿವಾದ ಈಗ ಬಗೆಹರಿದಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್, ಸಿಪಿಐ, ಆರ್ಜೆಡಿ ಪಕ್ಷಗಳು ಸೇರಿದಂತೆ ಕೆಲವು ಪಕ್ಷಗಳು ಈ ವಿವಾದ ಬಗೆ ಹರಿಯುವುದನ್ನು ಬಯಸುತ್ತಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಶೀಘ್ರದಲ್ಲಿ ಅಯೋಧ್ಯದಲ್ಲಿ ಭವ್ಯ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪ್ರತಿ ಕುಟುಂಬ 11 ರೂಪಾಯಿಗಳನ್ನು ಮತ್ತು ಕಲ್ಲನ್ನು ನೀಡಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.