ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಆಗಸ್ಟ್ನಲ್ಲಿ ರದ್ದುಗೊಳಿಸಿದಾಗಿನಿಂದ ಬಂಧನದಲ್ಲಿರುವ ರಾಜಕಾರಣಿಗಳು ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಧಕ್ಕೆ ಬರುವಂತಹ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ತೊಡಗುವುದಿಲ್ಲ ಎಂದು ಬಾಂಡ್ಗೆ ಸಹಿ ಹಾಕಲು ಒಪ್ಪಿದರೆ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಈಗಾಗಲೇ ಕೆಲವರು ಅಗತ್ಯವಿರುವ ಬಾಂಡ್ಗಳಿಗೆ ಸಹಿ ಹಾಕಿದ್ದಾರೆ ಮತ್ತು ಅವರುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
“ಇನ್ನೂ 23 ನಾಯಕರು ಬಂಧನದಲ್ಲಿದ್ದಾರೆ ಮತ್ತು ಅವರನ್ನು ಮನವೊಲಿಸುವ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ” ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಕೆಲವರನ್ನು ಸದ್ಭಾವನೆಯ ಸೂಚಕವಾಗಿ ಬಿಡುಗಡೆ ಮಾಡಲಾಗಿದೆ.
ಅಧಿಕಾರಿಯ ಪ್ರಕಾರ, ಮೂವರು ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಅವರ ಮಗ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡುವ ಯಾವುದೇ ನಿರ್ಧಾರವನ್ನು ಇನ್ನೂ ತೆಗೆದುಕೊಳ್ಳಲಾಗಿಲ್ಲ.
“ಒಮರ್ ಮತ್ತು ಮೆಹಬೂಬಾ ಇಬ್ಬರೂ ಈವರೆಗೆ ಬಾಂಡ್ಗೆ ಸಹಿ ಹಾಕಲು ನಿರಾಕರಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.