ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಬಗೆಗಿನ ತಮ್ಮ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇದೀಗ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನ ನಡೆಸಲು ಆರಂಭಿಸಿದೆ. ಈ ಮೂಲಕ ಜನರಿಗೆ ಈ ಕಾಯ್ದೆಯ ಬಗ್ಗೆ ಇದ್ದ ಎಲ್ಲಾ ಅನುಮಾನಗಳನ್ನು ದೂರ ಮಾಡಲು ನಿರ್ಧರಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಪ್ರತಿಪಕ್ಷಗಳು ರಾಜಕೀಯ ಉದ್ದೇಶಕ್ಕಾಗಿ ಹರಡಿದ ತಪ್ಪು ಸುದ್ದಿಗಳನ್ನು ನಂಬಿಕೊಂಡು ದೇಶದಾದ್ಯಂತ ಸಹಸ್ರ ಸಂಖ್ಯೆಯ ಜನರು ಬೀದಿಗಿಳಿದು ಹೋರಾಟ ಮಾಡಿದ್ದರು. ಈ ಹೋರಾಟದ ವೇಳೆ ಹಿಂಸಾಚಾರಗಳು ಭುಗಿಲೆದ್ದಿದ್ದವು. ಇಡೀ ದೇಶವೇ ಹೊತ್ತಿ ಉರಿಯುಂವತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಮುಸ್ಲಿಂ ಸಮುದಾಯದ ನಡುವೆ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್, ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಭಯ ಹುಟ್ಟಿಸಲಾಗಿದೆ. ಈ ಹಿನ್ನಲೆಯಲ್ಲಿ ಬಿಜೆಪಿಗೆ ಬೃಹತ್ ಮಟ್ಟದಲ್ಲಿ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಅಭಿಯಾನ ನಡೆಸುವುದು ಅನಿವಾರ್ಯವಾಗಿದೆ.
ಮುಸ್ಲಿಂ ಸಮುದಾಯವನ್ನು ತಲುಪಿ ಅವರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗೆಗಿನ ಸತ್ಯಾಂಶವನ್ನು ತಿಳಿಸುವ ಪ್ರಯತ್ನವನ್ನು ಬಿಜೆಪಿ ಮಾಡಲಿದೆ. ಈ ಕಾಯ್ದೆಯು 2014ರ ಡಿಸೆಂಬರ್ 31ರೊಳಗೆ ಭಾರತಕ್ಕೆ ಬಂದ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದ ಮುಸ್ಲಿಮೇತರ ಜನರಿಗೆ ಪೌರತ್ವವನ್ನು ನೀಡುವ ಉದ್ದೇಶವನ್ನು ಹೊಂದಿದೆ.
ಈ ಅಭಿಯಾನದ ಭಾಗವಾಗಿ ಈಗಾಗಲೇ ಬಿಜೆಪಿ ಕಾರ್ಟೂನ್ ಮಾದರಿಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದೆ. ಇದರಲ್ಲಿ ಮುಸ್ಲಿಂ ವ್ಯಕ್ತಿಗೆ ಎನ್ಆರ್ಸಿ ಮತ್ತು ಸಿಎಎ ಬಗೆಗಿನ ಸತ್ಯಾಂಶವನ್ನು ತಿಳಿಸುವ ಪ್ರಯತ್ನವನ್ನು ಮಾಡಲಾಗಿದೆ. ಪ್ರಶ್ನೋತ್ತರ ಮಾದರಿಯಲ್ಲಿ ಇದನ್ನು ವಿನ್ಯಾಸ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.