ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಅಸ್ಸಾಂನಲ್ಲಿ ತೀವ್ರ ವಿರೋಧಗಳು ವ್ಯಕ್ತವಾಗಿತ್ತು, ಇದೀಗ ಅಲ್ಲಿನ ಸರ್ಕಾರ ಅಲ್ಲಿನ ನಾಗರಿಕರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆಯನ್ನು ಮುಂದಿಟ್ಟಿದೆ. ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ನೇತೃತ್ವದ ಅಸ್ಸಾಂ ಸರ್ಕಾರವು ಸ್ಥಳೀಯೇತರ ವ್ಯಕ್ತಿಗಳು ತಮ್ಮ ರಾಜ್ಯದಲ್ಲಿ ಭೂಮಿಯನ್ನು ಖರೀದಿಸುವುದನ್ನು ತಡೆಯುವ ಶಾಸನವನ್ನು ಪರಿಚಯಿಸಲು ಸಜ್ಜಾಗಿದೆ.
ಅಸ್ಸಾಂಗೆ ವಲಸೆ ಬರುವವರ ಬಗ್ಗೆ ಸ್ಥಳೀಯ ಜನರಿಗೆ ಇರುವ ಭಯವನ್ನು ನಿವಾರಿಸುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ಅಸ್ಸಾಂ ಸರ್ಕಾರ ತೆಗೆದುಕೊಂಡಿದೆ. ವಲಸಿಗರು ಅಸ್ಸಾಂ ಸಂಸ್ಕೃತಿ ಮತ್ತು ಗುರುತನ್ನು ಹಾಳುಗೆಡಬಹುದು ಎಂಬ ಭಯ ಅಲ್ಲಿನ ಜನರಿಗೆ ಇರುವ ಕಾರಣದಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಈ ನಿರ್ಧಾರವನ್ನು ಡಿಸೆಂಬರ್ 21ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಮತ್ತು ರಾಜ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಬಹಿರಂಗಪಡಿಸಿದ್ದಾರೆ.
ಆಲ್ ಅಸ್ಸಾಂ ವಿದ್ಯಾರ್ಥಿ ಸಂಘ (ಎಎಎಸ್ಯು) ಸಂಘಟನೆಯು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಿಎಂ ಸೋನೊವಾಲ್ ಅವರ ಅಸ್ಸಾಂ ಗುರುತು, ಭಾಷೆ ಮತ್ತು ಭೂಮಿಯನ್ನು ರಕ್ಷಿಸಲಾಗಿದೆ ಎಂದು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ನಂತರ ಈ ಬೆಳವಣಿಗೆಗಳು ಸಂಭವಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.