ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮದಿನವನ್ನು ಇಂದು ದೇಶವ್ಯಾಪಿಯಾಗಿ ಆಚರಣೆ ಮಾಡಲಾಗುತ್ತಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಅಗಲಿದ ಧೀಮಂತ ನಾಯಕನಿಗೆ ದೆಹಲಿಯಲ್ಲಿನ ಅಟಲ್ ಸಮಾಧಿ ಸ್ಥಳದಲ್ಲಿ ಪುಷ್ಪ ನಮನವನ್ನು ಸಲ್ಲಿಸಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಸದೈವ್ ಅಟಲ್ ಸ್ಮಾರಕ ಬಳಿ ತೆರಳಿ ಅಗಲಿದ ಚೇತನಕ್ಕೆ ಗೌರವ ನಮನ ಸಲ್ಲಿಸಿದರು. ಬಿಜೆಪಿ ವತಿಯಿಂದ ಸ್ಮಾರಕದ ಬಳಿ ಭಜನೆ, ಗೀತ ಗಾಯನ ಕಾರ್ಯಕ್ರಮ ನಡೆದಿದೆ. ಇಂದು ಪ್ರಧಾನಿ ಮೋದಿ ಲಕ್ನೋದ ಲೋಕ ಭವನದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ” ದೇಶದ ನಾಗರಿಕರು ತಮ್ಮ ಹೃದಯದಲ್ಲಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅವರ ಜನ್ಮದಿನದಂದು ಗೌರವಾರ್ಪಣೆಗಳನ್ನು ಮಾಡುತ್ತಿದ್ದಾರೆ” ಎಂದಿದ್ದಾರೆ. ಅಲ್ಲದೇ, ವಾಜಪೇಯಿ ಅವರ ಸಾಧನೆಗಳನ್ನು ಬಣ್ಣಿಸುವ ವೀಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಈಗಾಗಲೇ ಮೋದಿ ಸರ್ಕಾರವು ವಾಜಪೇಯಿ ಸ್ಮರಣಾರ್ಥ ಹಲವಾರು ಸರ್ಕಾರಿ ಯೋಜನೆಗಳಿಗೆ ಅವರ ಹೆಸರನ್ನಿಟ್ಟಿದೆ. ಇದೀಗ ಹೊಸದಾಗಿ ಅಟಲ್ ಭೂಜಲ್ ಯೋಜನೆಯನ್ನು ತರುತ್ತಿದೆ. ಅಂತರ್ಜಲ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ತರಲಾಗುತ್ತಿರುವ ರೂ.6000 ಕೋಟಿಗಳ ಯೋಜನೆ ಇದಾಗಿದೆ.
ವಾಜಪೇಯಿ ಅವರು ಭಾಷಣ ಕೌಶಲ್ಯಕ್ಕಾಗಿ ಹೆಸರುವಾಸಿಯಾಗಿದ್ದರು, ಅವರು 1998 ರಲ್ಲಿ ಪೋಖ್ರಾನ್ನಲ್ಲಿ ನಡೆದ ಪರಮಾಣು ಪರೀಕ್ಷೆಯನ್ನು ಸಮರ್ಥಿಸಿಕೊಂಡು ಜಗತ್ತನ್ನೇ ನಿಬ್ಬೆರಗಾಗಿಸಿದ್ದರು.
देशवासियों के दिलों में बसे पूर्व प्रधानमंत्री भारत रत्न अटल बिहारी वाजपेयी जी को उनकी जन्म-जयंती पर कोटि-कोटि नमन। pic.twitter.com/9tCkmEUxnf
— Narendra Modi (@narendramodi) December 25, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.