ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಕೆಲ ದಿನಗಳ ನಂತರ, ಆಡಳಿತಾರೂಢ ಬಿಜೆಪಿ ತನ್ನ 30,000 ಕಾರ್ಯಕರ್ತರನ್ನು ಸಿಎಎ ಬಗ್ಗೆ ಜನರಿಗೆ ಮಾಹಿತಿ ನೀಡಲು ಮತ್ತು ಅದರ ಬಗೆಗಿನ ತಪ್ಪು ತಿಳುವಳಿಕೆಯನ್ನು ದೂರ ಮಾಡಲು ಪಶ್ಚಿಮ ಬಂಗಾಳಕ್ಕೆ ಕಳುಹಿಸಿಕೊಡಲಿದೆ.
ಈ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸಿಎಎ ಬಗ್ಗೆ ಜನರೊಂದಿಗೆ ಮಾತನಾಡಲಿದ್ದಾರೆ ಮತ್ತು ಅವರಿಗೆ ಕಾಯ್ದೆಯ ಬಗೆಗಿನ ಸಂಪೂರ್ಣ ಮಾಹಿತಿಯನ್ನು ವಿವರಿಸುತ್ತಾರೆ. ಈ ಕಾರ್ಯಕ್ರಮವು ಜನವರಿ ಅಂತ್ಯದಿಂದ ಪ್ರಾರಂಭವಾಗಲಿದೆ.
ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಅವರೊಂದಿಗಿನ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಕುರಿತು ಬಿಜೆಪಿಯ ಮಹಿಳಾ ವಿಭಾಗದೊಂದಿಗೆ ಶುಕ್ರವಾರ ಸಭೆ ನಡೆಯಲಿದೆ. ಅಲ್ಲದೇ, ಸಿಎಎಗೆ ಬೆಂಬಲ ನೀಡುವ ಕೋಟ್ಯಂತರ ಜನರ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಲಾಗುತ್ತಿದೆ.
ಈಗಾಗಲೇ ಸಿಎಎ ಭಾರತದಲ್ಲಿ ವಾಸಿಸುವ ಜನರ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಈ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. ಪ್ರಧಾನಿ ಮೋದಿ ಕೂಡ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಬಗ್ಗೆ ಮುಸ್ಲಿಮರ ಆತಂಕವನ್ನು ನಿವಾರಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೂ ಕೆಲವರು ವಿನಾಕಾರಣ ಗಲಾಟೆ, ದೊಂಬಿಗೆ ಇಳಿಯುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.