ಶಿಮ್ಲಾ: ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮನಸ್ಸಿನಲ್ಲಿ ಭಯ ಹುಟ್ಟಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಅಲ್ಲದೇ, ಮುಸ್ಲಿಮರ ಪೌರತ್ವವನ್ನು ಯಾರೂ ಕಸಿದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ನಡೆದ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವರು, ಪೌರತ್ವ ತಿದ್ದುಪಡಿ ಕಾಯ್ದೆ 2019 ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಬಗ್ಗೆ ಕಾಂಗ್ರೆಸ್ ಪಕ್ಷ ವದಂತಿಗಳನ್ನು ಹಬ್ಬಿಸಿದೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ನೇತೃತ್ವದ ಬಿಜೆಪಿ ಸರ್ಕಾರದ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಮಾವೇಶದಲ್ಲಿ ಭಾಗಿಯಾಗಿ ಮಾಡಿದ ಅರ್ಧ ಗಂಟೆಯ ಭಾಷಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಲವಾಗಿ ಸಮರ್ಥಿಸಿಕೊಂಡರು.
“ಮುಸ್ಲಿಮರ ಪೌರತ್ವವನ್ನು ಯಾರೂ ತೆಗೆದು ಹಾಕಲಾಗುವುದಿಲ್ಲ. ಕಾಂಗ್ರೆಸ್ ಮತ್ತು ಕಂಪನಿ ಪೌರತ್ವ ತಿದ್ದುಪಡಿ ಕಾಯ್ದೆಯೊಂದಿಗೆ ಅಲ್ಪಸಂಖ್ಯಾತರ ಪೌರತ್ವವನ್ನು ಕಸಿದುಕೊಳ್ಳಲಾಗುವುದು ಎಂಬ ವದಂತಿಗಳನ್ನು ಹರಡುತ್ತಿದೆ” ಎಂದಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿಯನ್ನು ನಡೆಸಿದ ಅವರು, “ಕಾಯ್ದೆಯಲ್ಲಿ ಯಾರದ್ದಾದರು ಪೌರತ್ವವನ್ನು ಕಸಿದುಕೊಳ್ಳುವ ಒಂದೇ ಒಂದು ಷರತ್ತು ಇರುವುದನ್ನು ರಾಹುಲ್ ಅವರು ತೋರಿಸಿಕೊಡುವರೇ” ಎಂದು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.