ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಅಭಿನಂದನಾ ಪತ್ರವನ್ನು ಬರೆದಿದ್ದಾರೆ. ನಿಸ್ವಾರ್ಥವಾಗಿ ರಾಷ್ಟ್ರದ ಏಳಿಗೆಗೆ ಶ್ರಮಿಸುತ್ತಿರುವುದಕ್ಕೆ ಪ್ರಧಾನಿಯನ್ನು ಅವರು ಕೊಂಡಾಡಿದ್ದಾರೆ.
ಮೋದಿಯವರು 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದಂದಿನಿಂದ ಹಿಡಿದು ಇಲ್ಲಿಯವರೆಗೂ ದೇಶದ ಸರ್ವತೋಮುಖ ಅಭಿವೃದ್ಧಿ ಮತ್ತು ಭದ್ರತೆಗೆ ಸಾಕಷ್ಟು ಶ್ರಮಿಸಿದ್ದಾರೆ. ಶ್ಲಾಘನೀಯ ಮತ್ತು ಅಭಿನಂದನೀಯ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಪ್ರಾಣೇಶ್ ಹೇಳಿದ್ದಾರೆ.
ಸ್ವಾತಂತ್ರ್ಯದ ನಂತರ ಭದ್ರತೆಗೆ ಸಂಬಂಧಿಸಿದಂತೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳದ ಹಿನ್ನಲೆಯಲ್ಲಿ ದೇಶ ಬಲಹೀನವಾಗಿತ್ತು. ಆದರೆ ಮೋದಿಯವರು ಈ ವ್ಯವಸ್ಥೆಯನ್ನು ಸರಿಪಡಿಸಿದರು. ಭಾರತ ಭದ್ರತೆಯಲ್ಲಿ ವಿಶ್ವದಲ್ಲೇ ಅಗ್ರಸ್ಥಾನದಲ್ಲಿ ನಿಲ್ಲುವಂತೆ ಮಾಡಿದರು. 370ನೇ ಮತ್ತು 35 ವಿಧಿಯನ್ನು ರದ್ದುಗೊಳಿಸಿದ ದೇಶದಲ್ಲಿದ್ದ ಎರಡು ಸಂವಿಧಾನ, ಎರಡು ಸಂವಿಧಾನಗಳನ್ನು ತೊಡೆದು ಹಾಕಿದರು. ಈ ಮೂಲಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕಂಡ ಕನಸನ್ನು ಈಡೇರಿಸಿದರು ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದ ಮೋದಿಯವರ ಕಾರ್ಯವನ್ನು ಕೊಂಡಾಡಿರುವ ಪ್ರಾಣೇಶ್, ಈ ಕಾಯ್ದೆ ಅಖಂಡ ಭಾರತದ ಪರಿಕಲ್ಪನೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ. ದೇಶದ ಒಳಿತಿಗೆ ಇನ್ನಷ್ಟು ಇನ್ನಷ್ಟು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿಟ್ಟತನ ಮೋದಿ ಸಿಗಲಿ ಎಂದು ಪ್ರಾಣೇಶ್ ಹಾರೈಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.