ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರಾಜ್ಯಗಳಿಗೆ ಶಾಕ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಕೇಂದ್ರವು ಆನ್ಲೈನ್ನಲ್ಲಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಕೇರಳ ಸೇರಿದಂತೆ ಹಲವಾರು ರಾಜ್ಯಗಳು ವ್ಯಕ್ತಪಡಿಸಿದ ತೀವ್ರ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ಮ್ಯಾಜಿಸ್ಟ್ರೇಟ್ ಮೂಲಕ ಪೌರತ್ವಕ್ಕಾಗಿನ ಅರ್ಜಿಗಳನ್ನು ಪ್ರಕ್ರಿಯೆಗೆ ಒಳಪಡಿಸುವ ಪ್ರಸ್ತುತ ವಿಧಾನವನ್ನು ದೂರವಿಡುವ ಆಯ್ಕೆಯನ್ನು ಗೃಹ ಸಚಿವಾಲಯವು ತೆಗೆದುಕೊಳ್ಳುತ್ತಿದೆ. ಕೇರಳ ಮಂಗಳವಾರ ಕಾಯ್ದೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು.
“ನಾವು ಜಿಲ್ಲಾಧಿಕಾರಿಗಳ ಬದಲಿಗೆ ಹೊಸ ಪ್ರಾಧಿಕಾರವನ್ನು ನೇಮಿಸುವ ಬಗ್ಗೆ ಯೋಚಿಸುತ್ತಿದ್ದೇವೆ ಮತ್ತು ಅರ್ಜಿ, ದಾಖಲೆಗಳ ಪರಿಶೀಲನೆ ಸೇರಿದಂತೆ ಆನ್ಲೈನ್ನಲ್ಲಿ ಭಾರತೀಯ ಪೌರತ್ವ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ರೂಪಿಸುತ್ತೇವೆ” ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕ್ರಿಯೆಯು ಸಂಪೂರ್ಣವಾಗಿ ಆನ್ಲೈನ್ ಆದರೆ, ಯಾವುದೇ ಮಟ್ಟದಲ್ಲಿ ರಾಜ್ಯ ಸರ್ಕಾರದಿಂದ ಹಸ್ತಕ್ಷೇಪ ನಡೆಯಲು ಸಾಧ್ಯವಾಗುವುದಿಲ್ಲ.
ಅಲ್ಲದೆ, ಸಂವಿಧಾನದ 7 ನೇ ಪರಿಚ್ಛೇದದ ಕೇಂದ್ರ ಪಟ್ಟಿಯಡಿಯಲ್ಲಿ ಶಾಸನವನ್ನು ಜಾರಿಗೆ ತಂದಿದ್ದರಿಂದ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ತಿರಸ್ಕರಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
“ಕೇಂದ್ರ ಪಟ್ಟಿಯಲ್ಲಿರುವ ಕೇಂದ್ರ ಕಾನೂನಿನ ಅನುಷ್ಠಾನವನ್ನು ನಿರಾಕರಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ” ಎಂದು ಗೃಹ ಸಚಿವಾಲಯದ ಉನ್ನತ ಅಧಿಕಾರಿ ಹೇಳಿದ್ದಾರೆ.
ರಕ್ಷಣಾ, ವಿದೇಶಾಂಗ ವ್ಯವಹಾರ, ರೈಲ್ವೆ, ಪೌರತ್ವ ಮತ್ತು ನೈಸರ್ಗೀಕರಣವನ್ನು ಒಳಗೊಂಡಿರುವ 97 ವಿಷಯಗಳು ಕೇಂದ್ರ ಕಾನೂನಿನ ಪಟ್ಟಿಯಲ್ಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.