ಪೆರಂಬಲೂರು: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ತಮಿಳು ಬರಹಗಾರ ನೆಲ್ಲೈ ಕಣ್ಣನ್ ಅವರನ್ನು ಪೆರಂಬಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 29 ರಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಡೆಸಿದ್ದ ಸಭೆಯಲ್ಲಿ ತಿರುನೆಲ್ವೇಲಿ ಪ್ರಚೋದನೆಯ ಹೇಳಿಕೆಯನ್ನು ನೀಡಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ತಮಿಳುನಾಡಿನ ಬಿಜೆಪಿ ಕಾರ್ಯಕರ್ತರು ಕಣ್ಣನ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದಕ್ಕೂ ಮುನ್ನ ಬುಧವಾರ ಕಣ್ಣನ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೇಸರಿ ಪಡೆ ಚೆನ್ನೈನ ಮರೀನಾ ಬೀಚ್ ನಲ್ಲಿ ಪ್ರತಿಭಟನೆ ನಡೆಸಿತ್ತು. ಚೆನ್ನೈ ಪೊಲೀಸರು ಈ ಸಂದರ್ಭದಲ್ಲಿ ಎಚ್ ಬಿ ರಾಜಾ, ಲಾ ಗಣೇಶನ್, ಪೊನ್ ರಾಧಾಕೃಷ್ಣನ್, ಮತ್ತು ಸಿಪಿ ರಾಧಾಕೃಷ್ಣನ್ ಸೇರಿದಂತೆ ಹಲವಾರು ಬಿಜೆಪಿ ನಾಯಕರನ್ನು ಸ್ಥಳದಿಂದ ವಶಕ್ಕೆ ಪಡೆದಿದ್ದರು.
ಬಿಜೆಪಿ ಮುಖಂಡರು ಸಲ್ಲಿಸಿದ ಬಹು ದೂರುಗಳ ಆಧಾರದ ಮೇಲೆ ಪೊಲೀಸರು ಕಣ್ಣನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ರಾಜ್ಯ ನಾಯಕತ್ವವು ಕಣ್ಣನ್ ಅವರ ಸಿಎಎ ವಿರೋಧಿ ಭಾಷಣವನ್ನು ಖಂಡಿಸಿತ್ತು ಮತ್ತು ಅವರ ಮಾತುಗಳನ್ನು ಯಾರೂ ಸ್ವೀಕರಿಸಲು ಸಾಧ್ಯವಿಲ್ಲ ಎಂದಿದ್ದರು.
“ಇದು ಅತ್ಯಂತ ಖಂಡನೀಯ. ನೆಲ್ಲೈ ಕಣ್ಣನ್ ಅವರ ಈ ಮಾತುಗಳನ್ನು ಯಾರೂ ಒಪ್ಪುವುದಿಲ್ಲ. ವಾಸ್ತವವಾಗಿ ಅವರು ಮುಸ್ಲಿಂ ರ್ಯಾಲಿಯಲ್ಲಿ ಮಾತನಾಡಿದರು. ಆ ಸಂದರ್ಭದಲ್ಲಿ ಮುಸ್ಲಿಂ ನಾಯಕರು ಇದನ್ನು ಖಂಡಿಸಬೇಕಾಗಿತ್ತು” ಎಂದು ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಹೇಳಿದ್ದಾರೆ.
ಕಣ್ಣನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504, 505 (1) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ಮೇಲೆ ಶಾಂತಿಗೆ ಭಂಗ ತಂದ, ಪ್ರಚೋದಿಸುವ, ಉದ್ದೇಶಪೂರ್ವಕ ಅವಮಾನ ಮತ್ತು ಸಾರ್ವಜನಿಕ ಜೀವನಕ್ಕೆ ಭಯ, ಎಚ್ಚರಿಕೆ ಅಥವಾ ಅಡ್ಡಿ ಉಂಟುಮಾಡುವ ಉದ್ದೇಶವಿದೆ ಎಂಬ ಆರೋಪ ಹೊರಿಸಲಾಗಿದೆ.
“ಮೋದಿ ಮತ್ತು ಅಮಿತ್ ಶಾರನ್ನು ಕೊಲೆ ಮಾಡದೆ ಮುಸ್ಲಿಮರು ಯಾಕೆ ಬಿಟ್ಟಿದ್ದಾರೆ?” ಎಂಬ ಹೇಳಿಕೆಯನ್ನು ಕಣ್ಣನ್ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.