ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಹಾಳು ಮಾಡಲು ಶತ ಪ್ರಯತ್ನವನ್ನು ನಡೆಸುತ್ತಿರುವ ಪಾಕಿಸ್ಥಾನ ಇದೀಗ ಮತ್ತೊಂದು ಬಾರಿಗೆ ಮುಖಭಂಗಕ್ಕೀಡಾಗಿದೆ. ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಅವರು ಉತ್ತರಪ್ರದೇಶದಲ್ಲಿ ಮುಸ್ಲಿಮರ ಮೇಲೆ ಪೊಲೀಸರು ದೌರ್ಜನ್ಯವನ್ನು ನಡೆಸುತ್ತಿದ್ದಾರೆ ಎಂಬುದನ್ನು ಬಿಂಬಿಸುವ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಆದರೆ ಈ ವೀಡಿಯೋ 2013ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಘಟನೆಯಾಗಿದೆ.
ವಿಶ್ವಸಂಸ್ಥೆಯ ಭಾರತದ ಖಾಯಂ ರಾಯಭಾರಿ ಸೈಯದ್ ಅಕ್ಬರುದ್ದೀನ್ ಅವರು ಇಮ್ರಾನ್ ಖಾನ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. ಅಲ್ಲದೇ, ಅವರ ವೀಡಿಯೋವನ್ನು ಟ್ವಿಟರಿನಲ್ಲಿ ಹಂಚಿಕೊಂಡು “Repeat offenders. Old habits die hard” ಎಂಬ ಒಕ್ಕಣೆಯನ್ನು ನೀಡಿದ್ದಾರೆ.
ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಅವರೂ ಇಮ್ರಾನ್ ಖಾನ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದು, ಕನಿಷ್ಠ ಒಂದು ಬಾರಿಯೂ ಕ್ರಾಸ್ ಚೆಕ್ ಮಾಡದೆ ವೀಡಿಯೋ ಹಂಚಿಕೊಳ್ಳುತ್ತಾರೆ ಎಂದು ಜರೆದಿದ್ದಾರೆ.
Repeat Offenders…#Oldhabitsdiehard pic.twitter.com/wmsmuiMOjf
— Syed Akbaruddin (@AkbaruddinIndia) January 3, 2020
ಇಮ್ರಾನ್ ಖಾನ್ ಅವರ ವೀಡಿಯೋವನ್ನು ಫ್ಯಾಕ್ಟ್ ಚೆಕ್ ಮಾಡಲಾಗಿದ್ದು, ಇದು 2013ರ ದೃಶ್ಯವಾಗಿದೆ, ಬಾಂಗ್ಲಾದೇಶದಲ್ಲಿ ಜನರ ಮೇಲೆ ಪೊಲೀಸರು ಕ್ರಮಕೈಗೊಳ್ಳುತ್ತಿರುವ ದೃಶ್ಯವಾಗಿದೆ. ಇದರಲ್ಲಿ ಪೊಲೀಸರ ಶೀಲ್ಡ್ನಲ್ಲಿ RAB ಎಂದು ಬರೆಯಲಾಗಿದೆ. RAB ಅಂದರೆ ಬಾಂಗ್ಲಾದೇಶದ Rapid Action Battalion ಆಗಿದೆ. ಆದರೆ ಖಾನ್ ಇದನ್ನು ಭಾರತದ ರಾಜ್ಯ ಉತ್ತರಪ್ರದೇಶದಲ್ಲಿ ಮುಸ್ಲಿಮರ ಮೇಲಿನ ಪೊಲೀಸ್ ದೌರ್ಜನ್ಯ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ.
ಎಲ್ಲಾ ಕಡೆಯಿಂದಲೂ ಇದಕ್ಕೆ ಆಕ್ರೋಶ ವ್ಯಕ್ತವಾದ ಬಳಿಕ ವೀಡಿಯೋವನ್ನು ಖಾನ್ ಡಿಲೀಟ್ ಮಾಡಿದ್ದಾರೆ. ಆದರೆ ಫೇಕ್ ವಿಡಿಯೋವನ್ನು ಟ್ವೀಟ್ ಮಾಡಿದ್ದಕ್ಕಾಗಿ ಖಾನ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.