ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಾಮಾನ್ಯ ಜನರ ಬೆಂಬಲವನ್ನು ಪಡೆದುಕೊಳ್ಳುವ ಸಲುವಾಗಿ ಬಿಜೆಪಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ಅಭಿಯಾನವನ್ನು ಪ್ರಾರಂಭಿಸಿದೆ. ಪೌರತ್ವ ಕಾನೂನಿಗೆ ತಮ್ಮ ಬೆಂಬಲವನ್ನು ನೋಂದಾಯಿಸಲು ಟೋಲ್ ಫ್ರೀ ನಂಬರಿಗೆ ಮಿಸ್ಡ್ ಕಾಲ್ ಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿಕೊಳ್ಳಲಾಗಿದೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಅನಿಲ್ ಜೈನ್ ಅವರು, “ಈ ಅಭಿಯಾನವು ಸಿಎಎ ಬಗ್ಗೆ ಇರುವ ಅನುಮಾನಗಳನ್ನು ಹೋಗಲಾಡಿಸುವ ಗುರಿಯನ್ನು ಹೊಂದಿದೆ. ಟೋಲ್-ಫ್ರೀ ಸಂಖ್ಯೆ 8866288662ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಪೌರತ್ವ ತಿದ್ದುಪಡಿ ಕಾನೂನಿಗೆ ಜನರು ತಮ್ಮ ಬೆಂಬಲವನ್ನು ವಿಸ್ತರಿಸಬಹುದು” ಎಂದು ಹೇಳಿದ್ದಾರೆ.
“ಸಿಎಎಗೆ ಸಂಬಂಧಿಸಿದ ಗೊಂದಲಗಳನ್ನು ಹೋಗಲಾಡಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ನಾವು 3 ಕೋಟಿ ಕುಟುಂಬಗಳೊಂದಿಗೆ ಸಂಪರ್ಕ ಸಾಧಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಜೈನ್ ಹೇಳಿದ್ದಾರೆ.
ಪ್ರಮುಖವಾಗಿ ಹಿರಿಯ ಬಿಜೆಪಿ ನಾಯಕರು ಮತ್ತು ಚುನಾಯಿತ ಪ್ರತಿನಿಧಿಗಳು ಮನೆ-ಮನೆಗೆ ತೆರಳಿ ಜನರನ್ನು ಭೇಟಿಯಾಗಲಿದ್ದಾರೆ ಮತ್ತು ಅಭಿಯಾನದ ಭಾಗವಾಗಿ ಸಿಎಎಯ ನಿಬಂಧನೆಗಳನ್ನು ಅವರಿಗೆ ವಿವರಿಸಲಿದ್ದಾರೆ.
ಸಿಎಎ ವಿರುದ್ಧ ಪ್ರತಿಪಕ್ಷಗಳು ಹಬ್ಬುತ್ತಿರುವ ಸುಳ್ಳಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಮತ್ತು ಸಿಎಎ ಕಾಯ್ದೆ ಸತ್ಯಾಂಶಗಳ ಬಗ್ಗೆ ತಿಳಿಸಿಕೊಡಲು ಬಿಜೆಪಿ ಬೃಹತ್ ಸಮಾವೇಶಗಳನ್ನು ಆಯೋಜನೆಗೊಳಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.