ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಸೋಮವಾರ ದೆಹಲಿ ವಿಧಾನಸಭಾ ಚುನಾವಣೆಯ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಫೆಬ್ರವರಿ 8 ರಂದು ಚುನಾವಣೆ ನಡೆಯಲಿದೆ, ಫೆಬ್ರವರಿ 11 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಚುನಾವಣೆಯ ಘೋಷಣೆಯೊಂದಿಗೆ ದೆಹಲಿಯಲ್ಲಿ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ಒಟ್ಟು 13,750 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ.
70 ಸದಸ್ಯರ ದೆಹಲಿ ವಿಧಾನಸಭೆಯ ಅವಧಿ ಫೆಬ್ರವರಿ 22 ಕ್ಕೆ ಕೊನೆಗೊಳ್ಳುತ್ತದೆ. ಅದಕ್ಕೂ ಮೊದಲು ಹೊಸ ವಿಧಾನಸಭೆಯನ್ನು ರಚಿಸಬೇಕಾಗಿದೆ. 2015 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ರಾಜ್ಯ ವಿಧಾನಸಭೆಯಲ್ಲಿ ಒಟ್ಟು 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ಚುನಾವಣೆಯಲ್ಲಿ ಭಾರೀ ಮುನ್ನಡೆಯನ್ನು ಗಳಿಸಿತ್ತು.
ಈ ಬಾರಿ ಆಮ್ ಆದ್ಮಿ ಪಕ್ಷ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ನಡೆಯಲಿದೆ. ಈಗಾಗಲೇ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸಿವೆ.
ಅಭಿವೃದ್ಧಿ ಅಜೆಂಡಾವನ್ನು ಮುಂದಿಟ್ಟುಕೊಂಡು ಬಿಜೆಪಿ ಮತಯಾಚಣೆ ಮಾಡುತ್ತಿದೆ, ಆಮ್ ಆದ್ಮಿ ತಾವು ಮಾಡಿದ ಸಾಧನೆಗಳನ್ನು ಮುಂದಿಟ್ಟು ಜನರನ್ನು ಸೆಳೆಯಲು ಪ್ರಯತ್ನಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.