ನವದೆಹಲಿ: 1987ರಲ್ಲಿ ವೆಸ್ಟರ್ನ್ ಕಮಾಂಡ್ ಮುಖ್ಯಸ್ಥರಾಗಿ ನೇಮಕವಾಗುವುದಕ್ಕೂ ಮುನ್ನ ಸೇನೆಯಲ್ಲಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ ಲೆಫ್ಟಿನೆಂಟ್ ಜನರಲ್ ಪ್ರೇಮ್ ನಾಥ್ ಹೂನ್ ಸೋಮವಾರ ಸಂಜೆ ಪಂಚಕುಲದಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸು.
1984ರಲ್ಲಿ ಪಾಕಿಸ್ಥಾನ ವಿರುದ್ಧದ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಲೆಫ್ಟಿನೆಂಟ್ ಜನರಲ್ ಹೂನ್ ತಮ್ಮ 90 ನೇ ವಯಸ್ಸಿನಲ್ಲಿ ಸೋಮವಾರ ಸಂಜೆ ನಿಧನರಾದರು. ಅನಾರೋಗ್ಯದ ಕಾರಣ ಅವರನ್ನು ಪಂಚಕುಲದ ಚಂಡಿಮಾಂಡಿರ್ ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಸಂಜೆ 5: 30 ರ ಸುಮಾರಿಗೆ ಅವರನ್ನು ಸಾವಿನ ಸುದ್ದಿಯನ್ನು ಘೋಷಿಸಲಾಯಿತು.
ವಿಭಜನೆ ಪೂರ್ವ ಭಾರತದಲ್ಲಿ 1929ರ ಅಕ್ಟೋಬರ್ 4 ರಂದು ಜನಿಸಿದ ಲೆಫ್ಟಿನೆಂಟ್ ಜನರಲ್ ಹೂನ್ ಅವರು, ಕಾಶ್ಮೀರ ಪ್ರದೇಶದಲ್ಲಿನ ಸಿಯಾಚಿನ್ ಗ್ಲೇಸಿಯರ್ ಅನ್ನು ಸ್ವತಂತ್ರಗೊಳಿಸಲು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಶನ್ ಮೇಘದೂತ್ನ ನೇತೃತ್ವವನ್ನು ವಹಿಸಿದ್ದರು.
ಮುಂಚೂಣಿ ಸೈನಿಕನಾಗಿ, ಅವರು ಚೀನಾದ ಆಕ್ರಮಣ ಮತ್ತು 1965 ರ ಪಾಕಿಸ್ಥಾನದ ವಿರುದ್ಧದ ಯುದ್ಧದ ಸಮಯದಲ್ಲಿ ಭಾರತದ ಗಡಿಗಳನ್ನು ರಕ್ಷಣೆ ಮಾಡಿದರು. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಪಿಎನ್ ಹೂನ್ ಅವರ ನಿಧನಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. “ನಿವೃತ್ತ ಲೆಫ್ಟಿನೆಂಟ್ ಜನರಲ್ ಪಿ.ಎನ್. ಹೂನ್ ಅವರ ನಿಧನದಿಂದ ತೀವ್ರ ದುಃಖಿತರಾಗಿದ್ದೇವೆ. ಅವರು ಭಾರತಕ್ಕೆ ಅತ್ಯಂತ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸಿದರು ಮತ್ತು ನಮ್ಮ ರಾಷ್ಟ್ರವನ್ನು ಸದೃಢವಾಗಿಸಲು ಮತ್ತು ಹೆಚ್ಚು ಸುರಕ್ಷಿತವಾಗಿಸಲು ಮಹತ್ವದ ಕೊಡುಗೆ ನೀಡಿದರು. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಓಂ ಶಾಂತಿ” ಎಂದು ಟ್ವೀಟ್ ಮಾಡಿದ್ದಾರೆ.
Extremely saddened by the passing away of Lt Gen PN Hoon (retd). He served India with utmost dedication and contributed significantly towards making our nation stronger and more secure. My thoughts are with his family and friends in this sad hour. Om Shanti.
— Narendra Modi (@narendramodi) January 7, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.