ಮುಂಬಯಿ: 1993ರ ಮುಂಬಯಿ ಸರಣಿ ಸ್ಫೋಟದ ರುವಾರಿ ಯಾಕುಬ್ ಅಬ್ದುಲ್ ರಝಾಕ್ ಮೆಮೊನ್ನನ್ನು ಜುಲೈ 30ರಂದು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ನೇಣುಗಂಬಕ್ಕೆ ಏರಿಸಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸಿದೆ.
ತನ್ನ ಮರಣದಂಡನೆ ಶಿಕ್ಷೆಯನ್ನು ವಜಾ ಮಾಡುವಂತೆ ಕೋರಿ ಈತ ಸಲ್ಲಿಸಿದ ಮನವಿ ಅರ್ಜಿ ಸುಪ್ರೀಂನಲ್ಲಿ ಜುಲೈ 21ರಂದು ವಿಚಾರಣೆಗೆ ಬರಲಿದೆ. ಈ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದರೆ ಮಾತ್ರ ಆತನನ್ನು ನೇಣುಗಂಬಕ್ಕೆ ಏರಿಸಲು ಸಾಧ್ಯವಾಗುತ್ತದೆ.
ಈಗಾಗಲೇ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಈತನ ಕ್ಷಮಾಧಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಮರಣದಂಡನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುವ ನಿರ್ದೇಶನಗಳನ್ನು ಪಾಲಿಸುತ್ತೇವೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.
ಮೆಮೊನ್ ಮನವಿ ತಿರಸ್ಕೃತವಾದರೆ ಜುಲೈ ೩೦ರಂದು ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಈತನನ್ನು ಗಲ್ಲಿಗೇರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.