ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ 2019 ಭಾರತದಲ್ಲಿ ಜನವರಿ 10ರ ಮಧ್ಯರಾತ್ರಿಯಿಂದ ಅನುಷ್ಠಾನಕ್ಕೆ ಬಂದಿದೆ ಎಂದು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯ ಮೂಲಕ ತಿಳಿಸಿದೆ.
ಕೇಂದ್ರ ಗೃಹ ಸಚಿವಾಲಯದ ವೆಬ್ಸೈಟ್ನಲ್ಲಿ ಗೆಜೆಟ್ ಲಭ್ಯವಿದ್ದು, “ಪೌರತ್ವ (ತಿದ್ದುಪಡಿ) ಕಾಯ್ದೆ, 2019 (2019 ರ 47) ರ ಸೆಕ್ಷನ್ 1 ರ ಉಪವಿಭಾಗ (2) ನೀಡುವ ಅಧಿಕಾರದ ಅನ್ವಯ, ಕೇಂದ್ರ ಸರ್ಕಾರವು ಈ ಕಾಯಿದೆಯ ನಿಬಂಧನೆಗಳು ಜಾರಿಗೆ ಬರುವ ದಿನಾಂಕವಾಗಿ 2020ರ ಜನವರಿ 10 ಅನ್ನು ನಿಯೋಜಿಸಿದೆ” ಎಂದಿದೆ.
ಧಾರ್ಮಿಕ ಕಿರುಕುಳವನ್ನು ಎದುರಿಸಿದ ಅಫ್ಘಾನಿಸ್ಥಾನ, ಬಾಂಗ್ಲಾದೇಶ ಮತ್ತು ಪಾಕಿಸ್ಥಾನದಿಂದ 2014 ರ ಡಿಸೆಂಬರ್ 31 ರ ಮೊದಲು ಭಾರತಕ್ಕೆ ವಲಸೆ ಬಂದ ಹಿಂದೂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ ಮತ್ತು ಪಾರ್ಸಿ ವಲಸಿಗರಿಗೆ ಭಾರತದ ಪೌರತ್ವವನ್ನು ಪಡೆಯಲು ಈ ಕಾಯಿದೆಯು ಅವಕಾಶ ನೀಡುತ್ತದೆ.
ಈ ಕಾಯ್ದೆಯ ವಿರುದ್ಧ ಪ್ರತಿಪಕ್ಷಗಳು ದೊಡ್ಡ ಮಟ್ಟದಲ್ಲಿ ದೊಂಬಿ ಎಬ್ಬಿಸಿದ್ದವು. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳು ಪೌರತ್ವ ಕಾಯ್ದೆಯ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದವು. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಗಳನ್ನು ಧ್ವಂಸ ಮಾಡಿದ್ದರು.
ಆದರೆ ಪ್ರತಿಭಟನೆಗಳಿಗೆ ಜಗ್ಗದೆ ಕೇಂದ್ರ ಸರ್ಕಾರ ಕಾಯ್ದೆಯ ಪರವಾಗಿ ದೃಢವಾಗಿ ನಿಂತಿತು ಮತ್ತು ಅದನ್ನು ಸಮರ್ಥವಾಗಿ ಸಮರ್ಥನೆ ಮಾಡಿಕೊಂಡಿತು. ಇದೀಗ ಅದನ್ನು ಅನುಷ್ಠಾನಕ್ಕೂ ತಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.