ನವದೆಹಲಿ: ಜಮ್ಮು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಸಂಪರ್ಕವನ್ನು ಹೊಂದಿದ್ದ ಆದಿಲ್ ಗುಲ್ಜಾರ್ ಗನಿ ಎಂಬ ಉಗ್ರ ಹತ್ಯೆಗೊಳಗಾಗಿದ್ದಾರೆ.
ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಗನಿ ದಲ್ವಾನ್ ಬುದ್ಗಾಮ್ ನಿವಾಸಿಯಾಗಿದ್ದು ಹಲವಾರು ಭಯೋತ್ಪಾದಕ ಕೃತ್ಯಗಳು ಮತ್ತು ನಾಗರಿಕ ದೌರ್ಜನ್ಯ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದಾನೆ.
ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, “ಬುದ್ಗಾಮ್ ಎನ್ಕೌಂಟರ್ ಅಪ್ಡೇಟ್: ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ದಲ್ವಾನ್ ಬುದ್ಗಾಮಿನ ಆದಿಲ್ ಗುಲ್ಜಾರ್ ಗನಿ ಎಂದು ಗುರುತಿಸಲಾಗಿದೆ. ಪೊಲೀಸ್ ದಾಖಲೆಗಳ ಪ್ರಕಾರ, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ಗೆ ಈತ ಸಂಬಂಧಿಸಿದವನು. ಹಲವಾರು ಭಯೋತ್ಪಾದಕ ಅಪರಾಧಗಳು ಮತ್ತು ನಾಗರಿಕ ದೌರ್ಜನ್ಯಗಳಲ್ಲಿ ಭಾಗಿಯಾಗಿದ್ದಾನೆ” ಎಂದಿದೆ.
ಭದ್ರತಾ ಪಡೆ ಮತ್ತು ಪೊಲೀಸರ ತಂಡ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಭಾನುವಾರ, ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಪೊಲೀಸ್ ಮತ್ತು ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ನ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ಸನ್ನು ಕಾಣುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.