ಬೆಂಗಳೂರು : ಸ್ವಚ್ಛತೆಯನ್ನು ಉತ್ತೇಜಿಸಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಯನ್ನು ತಡೆಗಟ್ಟಲು ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರು ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮಿರರ್ ಬೋರ್ಡ್ಗಳನ್ನು ಅಳವಡಿಸಿದೆ.
ಸ್ವಚ್ಛತ ಬಗ್ಗೆ ಜಾಗೃತಿಯನ್ನು ಮೂಡಿಸಿದರು ಮತ್ತು ಎಚ್ಚರಿಕೆಗಳನ್ನು ನೀಡಿದರೂ ಕೂಡ ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ನಿಲ್ಲಿಸುತ್ತಿಲ್ಲ, ಈ ಹಿನ್ನಲೆಯಲ್ಲಿ ಬಿಬಿಎಂಪಿ ಮಿರರ್ ಬೋರ್ಡ್ ಮೊರೆ ಹೋಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರವಿಸರ್ಜನೆ ಮಾಡಬೇಡಿ ಎಂಬ ಎಚ್ಚರಿಕೆಯೊಂದಿಗೆ, ಈ ಮಿರರ್ ಬೋರ್ಡ್ ಜನರು ತಮ್ಮ ಸ್ಮಾರ್ಟ್ ಫೋನ್ ಮೂಲಕ ಒಮ್ಮೆ ಸ್ಕ್ಯಾನ್ ಮಾಡಿದ ಕ್ಯುಆರ್ ಕೋಡ್ ಅನ್ನು ಡಿಸ್ಪ್ಲೇ ಮಾಡುತ್ತದೆ ಮತ್ತು ಅವರಿಗೆ ಹತ್ತಿರದಲ್ಲಿರುವ ಸಾರ್ವಜನಿಕ ಶೌಚಾಲಯದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.
ಸಾರ್ವಜನಿಕ ಮೂತ್ರ ವಿಸರ್ಜನೆಯನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಚಿಂತನೆಯನ್ನು ನಡೆಸಲು ಕರೆಯಲಾದ ಸಭೆಯಲ್ಲಿ ಮಿರರ್ ರ್ಬೋರ್ಡ್ ಅಳವಡಿಸುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಯಿತು ಎಂದು ಬಿಬಿಎಂಪಿ ಆಯುಕ್ತ ಬಿಎಚ್ ಅನಿಲ್ ಕುಮಾರ್ ಹೇಳಿದ್ದಾರೆ.
ಪ್ರಸ್ತುತ ಮಿರರ್ ಬೋರ್ಡ್ಗಳನ್ನು ಕೆ. ಆರ್. ಮಾರ್ಕೆಟ್, ಬಾಳೆಕುಂದ್ರಿ ಸರ್ಕಲ್, ಇಂದಿರಾನಗರದಲ್ಲಿನ ಇಎಸ್ಐ ಕಂಪೌಂಡ್, ಕೋರಮಂಗಲದ ಜ್ಯೋತಿ ನಿವಾಸ ಕಾಲೇಜ್ ಮತ್ತು ಚರ್ಚ್ ಸ್ಟ್ರೀಟ್ಗಳಲ್ಲಿ ಅಳವಡಿಸಲಾಗಿದೆ.
ಅಲ್ಲದೆ ನಗರದಾದ್ಯಂತ ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲು ಯೋಜಿಸುವುದಾಗಿ ಆಯುಕ್ತರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.