ವಾರಣಾಸಿ: ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಪ್ರಧಾನಿ ನರೇಂದ್ರ ಮೊದಿ ಗುರುವಾರ ಭೇಟಿ ನೀಡಲಿದ್ದು, ಡೆರೆಕಾದಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಲ್ಲದೇ ಬನರಾಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ trauma centreರನ್ನು ಉದ್ಘಾಟಿಸಲಿದ್ದಾರೆ. ರಿಂಗ್ ರೋಡ್ಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ಇಂಟಿಗ್ರೇಟೆಡ್ ಪವರ್ ಡೆವಲಪ್ಮೆಂಟ್ ಸ್ಕೀಮ್ಗೆ ಚಾಲನೆ ನೀಡಲಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮೋದಿಯವರನ್ನು ಬಬತ್ಪುರದ ಲಾಲ್ ಬಹದ್ದೂರ್ ಶಾಸ್ತ್ರೀ ಏರ್ಪೋರ್ಟ್ನಲ್ಲಿ ಬರಮಾಡಿಕೊಳ್ಳಲಿದ್ದಾರೆ. ಅಲ್ಲಿಂದ ಇಬ್ಬರೂ ಹೆಲಿಕಾಫ್ಟರ್ ಮೂಲಕ ಹಿಂದೂ ಬನರಾಸ್ ವಿಶ್ವವಿದ್ಯಾನಿಲಯಕ್ಕೆ ತೆರಳಲಿದ್ದಾರೆ.
ಮೋದಿ ಸಮಾವೇಶಕ್ಕೆ ಸಾವಿರಾರು ಜನರು, ಬಿಜೆಪಿ ಕಾರ್ಯಕರ್ತರು ಜಮಾಯಿಸುವ ಸಾಧ್ಯತೆ ಇದೆ, ಕಳೆದ ರಾತ್ರಿಯಿಂದ ವಾರಣಾಸಿಯಲ್ಲಿ ಭಾರೀ ಮಳೆಯಾಗುತ್ತಿದೆ ಅದಕ್ಕಾಗಿ ವಾಟರ್ ಪ್ರೂಫ್ ಟೆಂಟ್ಗಳನ್ನು ಡೆರೆಕ್ನಲ್ಲಿ ಅಳವಡಿಸಲಾಗಿದೆ.
ಮೋದಿ ಆಗಮನದ ಹಿನ್ನಲೆಯಲ್ಲಿ ಭಾರೀ ಬಿಗಿ ಬಂದೋಬಸ್ತ್ಗಳನ್ನು ಏರ್ಪಡಿಸಲಾಗಿದೆ, ಎಲ್ಲಾ ಸಿದ್ಧತೆಗಳನ್ನು ಪ್ರಧಾನಿ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.