ನವದೆಹಲಿ: ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ ಆಹಾರಗಳು ಸಿಗಲಿ ಎಂಬ ಕಾರಣಕ್ಕೆ ತಮಿಳುನಾಡಿನ ಅಮ್ಮ ಕ್ಯಾಂಟೀನ್ ಮಾದರಿಯಲ್ಲೇ ದೆಹಲಿಯಲ್ಲಿ ‘ಆಮ್ ಆದ್ಮಿ ಕ್ಯಾಂಟೀನ್’ಗಳನ್ನು ಆರಂಭಿಸಲು ಎಎಪಿ ಸರ್ಕಾರ ಮುಂದಾಗಿದೆ.
ಈ ಕ್ಯಾಂಟೀನ್ಗಳಲ್ಲಿ 5ರಿಂದ 10 ರೂಪಾಯಿಗಳಿಗೆ ಊಟ ಸಿಗಲಿದೆ, ಮೊದಲು ಕೈಗಾರಿಕ ವಲಯ, ಆಸ್ಪತ್ರೆ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಈ ಕ್ಯಾಂಟೀನನ್ನು ಆರಂಭಿಸಲು ಚಿಂತಿಸಲಾಗಿದೆ. ಬಳಿಕ ಇತರ ಪ್ರದೇಶಗಳಿಗೂ ಇದನ್ನು ವಿಸ್ತರಿಸುವ ಯೋಜನೆ ಇದೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈ ಕ್ಯಾಂಟೀನ್ಗಳ ಉಸ್ತುವಾರಿಯನ್ನು ವಹಿಸಿಕೊಳ್ಳಲಿದೆ.
ಅಮ್ಮ ಕ್ಯಾಂಟೀನ್ ಮಾದರಿಯಂತೆಯೇ ಆಮ್ ಆದ್ಮಿ ಕ್ಯಾಂಟೀನ್ನಲ್ಲೂ ಕಡಿಮೆ ಬೆಲೆಗೆ ವಿವಿಧ ಆಹಾರಗಳು ಸಿಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.