ಜಮ್ಮು: ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಕೇವಲ ಬಾಯಿ ಮಾತಿನಲ್ಲಿ ಹೇಳದೆ, ಆ ರಾಜ್ಯದ ಅಭಿವೃದ್ಧಿಯತ್ತವೂ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಆ ಮೂಲಕ ಕಾಶ್ಮೀರಿ ಜನತೆಯ ಮನಗೆಲ್ಲುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಮುಂದಿನ ಐದು ವರ್ಷಕ್ಕಾಗಿ ಸುಮಾರು 70 ಸಾವಿರ ಕೋಟಿಯಿಂದ 1 ಲಕ್ಷ ಕೋಟಿಯವರೆಗಿನ ವಿವಿಧ ಪ್ಯಾಕೇಜ್ಗಳನ್ನು ಮೋದಿ ಜಮ್ಮು ಕಾಶ್ಮೀರಕ್ಕಾಗಿ ಘೋಷಣೆ ಮಾಡಲಿದ್ದಾರೆ.
ಐಐಟಿ, ಐಐಎಂ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಗಳು ಮುಮದಿನ ಐದು ವರ್ಷದಲ್ಲಿ ಕಣಿವೆ ರಾಜ್ಯದಲ್ಲಿ ಸ್ಥಾಪನೆಗೊಳ್ಳಲಿದೆ. ರಸ್ತೆ, ಶಿಕ್ಷಣ, ಆರೋಗ್ಯ, ವಿದ್ಯುತ್, ನವೀಕರಿಸಬಹುದಾದ ಇಂಧನ, ಪ್ರವಾಸೋದ್ಯಮ ಮುಂತಾದ ಕ್ಷೇತ್ರಗಳಿಗೆ ಕೇಂದ್ರ ನೀಡುತ್ತಿರುವ ಅನುದಾನ ಬಳಕೆಯಾಗಲಿದೆ.
ಪ್ರವಾಹದಿಂದ ನಿರ್ಗತಿಕರಾದವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಲು ವಿಶೇಷ ಪ್ಯಾಕೇಜ್ ನೀಡಲಾಗುತ್ತಿದೆ, ಶ್ರೀನಗರ ಮತ್ತು ಜಮ್ಮುವಿನಲ್ಲಿ ಸ್ಮಾರ್ಟ್ ಸಿಟಿಯನ್ನೂ ನಿರ್ಮಾಣ ಮಾಡುವ ಯೋಜನೆ ಇದೆ.
ಇಷ್ಟೊಂದು ಭಾರೀ ಮೊತ್ತದ ಅನುದಾನವನ್ನು ಹಿಂದಿನ ಯಾವ ಸರ್ಕಾರಗಳೂ ಜಮ್ಮು ಕಾಶ್ಮೀರಕ್ಕೆ ನೀಡಿಲ್ಲ, ಯುಪಿಎ ಸರ್ಕಾರ ಒಟ್ಟು 35 ಸಾವಿರ ಕೋಟಿ ಅನುದಾನ ನೀಡಿತ್ತು, ನರೇಂದ್ರ ಮೋದಿ ಸರ್ಕಾರ ಇದರ ದುಪ್ಪಟ್ಟು ಅನುದಾನವನ್ನು ಘೋಷಿಸುತ್ತಿದೆ.
ಶುಕ್ರವಾರ ಮೋದಿ ಜಮ್ಮು ಕಾಶ್ಮೀರಕ್ಕೆ ತೆರಳುವ ಸಂದರ್ಭ ಈ ಪ್ಯಾಕೇಜ್ಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಕಾಶ್ಮೀರಿ ಮಕ್ಕಳಿಗೆ ಉತ್ತಮ ಉದ್ಯೋಗವನ್ನು ನೀಡುವುದು, ಮೂಲಭೂತ ಸೌಕರ್ಯವನ್ನು ಕಲ್ಪಿಸುವ ಮಹತ್ವದ ಗುರಿ ಸರ್ಕಾರಕ್ಕಿದೆ. ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆಯತ್ತ ಯುವ ಜನತೆಯ ಚಿತ್ತ ಹರಿಯದಂತೆ, ಪ್ರತ್ಯೇಕತೆಯ ಕೂಗು ಕೇಳದಂತೆ ಮಾಡಲು ಇಂತಹ ಅಭಿವೃದ್ಧಿ ಕಾರ್ಯಗಳು ಅತ್ಯಗತ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.