ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದೆ. ಆರಂಭಿಕ ಹಂತದ ಮತ ಎಣಿಕೆಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಮುನ್ನಡೆಯನ್ನು ಸಾಧಿಸಿದೆ. 40 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಈ ಪಕ್ಷ ಮುನ್ನಡೆ ಸಾಧಿಸಿದೆ. ಬಿಜೆಪಿ ಎರಡನೇ ಸ್ಥಾನದಲ್ಲಿದೆ.
ಎಎಪಿ ಮುಖಂಡರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಅತೀಶಿ ಮರ್ಲೆನಾ ಮತ್ತು ರಾಘವ್ ಚಾಧಾ ಅವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದಾರೆ.
ಬೆಳಿಗ್ಗೆ 8 ಗಂಟೆಗೆ ಮತಗಳ ಎಣಿಕೆ ಕಾರ್ಯ ಆರಂಭಗೊಂಡಿದೆ. ದೆಹಲಿಯಾದ್ಯಂತ 21 ಎಣಿಕೆ ಕೇಂದ್ರಗಳಲ್ಲಿ ಎಣಿಕೆ ನಡೆಯುತ್ತಿದೆ. ಮಧ್ಯಾಹ್ನದ ಹೊತ್ತಿಗೆ ಅಂತಿಮ ಫಲಿತಾಂಶ ಹೊರಬೀಳಲಿದೆ.
ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ. ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ಇದೆ. ಆದರೆ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.