ನವದೆಹಲಿ: ಹರಿ ನಗರದಿಂದ ದೆಹಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಬಿಜೆಪಿ ನಾಯಕ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ತಮ್ಮ ಸೋಲಿನ ಹೊರತಾಗಿಯೂ ಚುನಾವಣೆ ಸಂದರ್ಭ ನೀಡಿದ ಭರವಸೆಯನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಬಾಲಕಿಯರಿಗಾಗಿ ಉಚಿತ ಸ್ವರಕ್ಷಣಾ ಕೋಚಿಂಗ್ ಇನ್ಸ್ಟಿಟ್ಯೂಟ್ ತೆರೆಯುವುದಾಗಿ ಅವರು ಘೋಷಿಸಿದ್ದಾರೆ.
ಹರಿ ನಗರದಲ್ಲಿ ಬಾಲಕಿಯರಿಗಾಗಿ ಸ್ವರಕ್ಷಣಾ ಕೋಚಿಂಗ್ ಸೆಂಟರ್ ತೆರೆಯುವುದಾಗಿ ಭರವಸೆ ನೀಡಿದ್ದೆ, ಚುನಾವಣೆಯಲ್ಲಿ ಸೋತರೂ ನೀಡಿದ ಭರವಸೆಯನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಬಗ್ಗಾ ಟ್ವೀಟ್ ಮಾಡಿದ್ದಾರೆ.
ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನಿರ್ಧರಿಸಿದ್ದಾರೆ. ಮುಂದಿನ 30 ದಿನಗಳಲ್ಲಿ ಕೋಚಿಂಗ್ ಸೆಂಟರ್ ತೆರೆಯಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಜನ ಬೆಂಬಲವನ್ನು ಹೊಂದಿರುವ ಬಗ್ಗಾ ಅವರು ಫಲಿತಾಂಶದ ಪ್ರಾರಂಭದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಆದರೆ ಅಂತಿಮವಾಗಿ ಎಎಪಿ ಅಭ್ಯರ್ಥಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದರು.
I will open Free self Defense Coaching Centre for Girls in Hari Nagar Vidhanasabha in next 30 Days. It was my promise in my manifesto, I lost but i will try my best to fullfil my Promise to my people on my own Capacity
— Tajinder Pal Singh Bagga (@TajinderBagga) February 11, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.