ಶ್ರೀನಗರ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯಲ್ಲಿರುವ ಜಾಗತಿಕವಾಗಿ ಪ್ರಸಿದ್ಧವಾದ ಸ್ಕೀಯಿಂಗ್ ತಾಣವಾದ ಗುಲ್ಮಾರ್ಗ್ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟವನ್ನು ಆಯೋಜನೆಗೊಳಿಸಲು ಸಜ್ಜಾಗಿದೆ. ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಕಾರ್ಯಕ್ರಮದಡಿ ಇಲ್ಲಿ ಕ್ರೀಡಾಕೂಟ ಆಯೋಜನೆಗೊಳ್ಳಲಿದೆ. ರಾಷ್ಟ್ರದಾದ್ಯಂತ ಕ್ರೀಡೆಗಳ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ಇದನ್ನು ಆಯೋಜಿಸಲಾಗುತ್ತಿದೆ.
ಮಾರ್ಚ್ 7 ರಿಂದ ಪ್ರಾರಂಭವಾಗುವ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟ ಐದು ದಿನಗಳ ಕಾಲ ಕಣಿವೆಯಲ್ಲಿ ನಡೆಯಲಿದೆ.
ನಿಗದಿತ ಮೆಗಾ ಕ್ರೀಡಾಕೂಟದ ವ್ಯವಸ್ಥೆಗಳನ್ನು ಪರಿಶೀಲಿಸಿದ ಯುವ ಸೇವೆಗಳು ಮತ್ತು ಕ್ರೀಡಾ ಕಾರ್ಯದರ್ಶಿ ಸರ್ಮದ್ ಹಫೀಜ್ ಅವರು ಸೋಮವಾರ, ಸಂಬಂಧಪಟ್ಟ ಇಲಾಖೆಗಳು ಮತ್ತು ಜನರೊಂದಿಗೆ ಸಭೆ ನಡೆಸಿದರು ಮತ್ತು ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಬೇಕಾದ ವ್ಯವಸ್ಥೆಗಳನ್ನು ಮಾಡಲು ಸಮಿತಿಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸ್ತುತ ದೇಶಾದ್ಯಂತ ನಡೆಯುತ್ತಿರುವ ರೋಡ್ ಶೋಗಳಲ್ಲಿ ಕ್ರೀಡಾಕೂಟದ ಬಗ್ಗೆ ವ್ಯಾಪಕ ಪ್ರಚಾರವನ್ನು ನಡೆಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಹಫೀಜ್ ನಿರ್ದೇಶನ ನೀಡಿದ್ದಾರೆ.
ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟವು ಸ್ನೋಬೋರ್ಡಿಂಗ್, ಸ್ನೋ ಸ್ಕೀಯಿಂಗ್, ಕ್ರಾಸ್ ಕಂಟ್ರಿ ಮತ್ತು ಸ್ನೋ-ಶೋ ಸೇರಿದಂತೆ ನಾಲ್ಕು ವಿಭಾಗಗಳಲ್ಲಿ 30 ಪಂದ್ಯಗಳಿಗೆ ಸಾಕ್ಷಿಯಾಗಲಿದೆ. ಅಲ್ಲದೇ, ಈ ಪ್ರದೇಶದ ಸ್ಥಳೀಯ ಮಕ್ಕಳಿಗಾಗಿ ಆಡಳಿತವು ಸ್ನೋ ಸೈಕ್ಲಿಂಗ್ ಮತ್ತು ಇತರ ಆಟಗಳನ್ನು ಆಯೋಜಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.