ನವದೆಹಲಿ: ರಕ್ಷಣಾ ಸಚಿವಾಲಯವು ಸಿಡಿಎಸ್ ಜನರಲ್ ಬಿಪಿನ್ ರಾವತ್ ನೇತೃತ್ವದಲ್ಲಿ ಹೊಸದಾಗಿ ರಚನೆ ಮಾಡಿದ ಮಿಲಿಟರಿ ವ್ಯವಹಾರ ಇಲಾಖೆ (ಡಿಎಂಎ)ಯಲ್ಲಿ ಶೀಘ್ರದಲ್ಲೇ ಸೇನಾಧಿಕಾರಿಗಳನ್ನು ಜಂಟಿ ಕಾರ್ಯದರ್ಶಿಗಳನ್ನಾಗಿ ಮತ್ತು ಹೆಚ್ಚುವರಿ ಕಾರ್ಯದರ್ಶಿಗಳನ್ನಾಗಿ ಹೊಂದಲಿದೆ. ಮಿಲಿಟರಿ ವ್ಯವಹಾರಗಳ ಇಲಾಖೆಯ ನೇತೃತ್ವವನ್ನು ಬಿಪಿನ್ ರಾವತ್ ಹೊಂದಿದ್ದಾರೆ.
ವರದಿಯ ಪ್ರಕಾರ, ಆಯಾ ಪಡೆಗಳಿಗೆ ಸಂಬಂಧಿಸಿದ ಆಡಳಿತ ಕಾರ್ಯಗಳನ್ನು ನೋಡಿಕೊಳ್ಳಲು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮೂವರು ಪ್ರಮುಖ ಜನರಲ್-ಶ್ರೇಣಿಯ ಅಧಿಕಾರಿಗಳನ್ನು ನೇಮಕ ಮಾಡಲು ಅಂತಿಮ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ.
“ಮೇಜರ್ ಜನರಲ್ ನಾರಾಯಣನ್, ರಿಯರ್ ಅಡ್ಮಿರಲ್ ಆರ್.ಕೆ.ಧೀರ್ ಮತ್ತು ಏರ್ ವೈಸ್ ಮಾರ್ಷಲ್ ಎಸ್.ಕೆ. ಜಾ ಸೇರಿದಂತೆ ಡಿಎಂಎಯ ಮೂವರು ಜಂಟಿ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಪ್ರಸ್ತಾವನೆಯನ್ನು ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಲಾಗಿದೆ” ಎಂದು ರಕ್ಷಣಾ ಸಚಿವಾಲಯದ ಮೂಲಗಳು ಉಲ್ಲೇಖಿಸಿವೆ.
ಲೆಫ್ಟಿನೆಂಟ್ ಜನರಲ್ ಶ್ರೇಣಿಯ ಅಧಿಕಾರಿಗಳನ್ನು ಹೆಚ್ಚುವರಿ ಕಾರ್ಯದರ್ಶಿಗಳನ್ನಾಗಿ ನೇಮಿಸುವ ಮತ್ತೊಂದು ಪ್ರಸ್ತಾವನೆಯನ್ನು ಡಿಎಂಎ ಸರ್ಕಾರಕ್ಕೆ ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಮಿಲಿಟರಿ ವ್ಯವಹಾರಗಳ ಇಲಾಖೆ, ರಕ್ಷಣಾ ಸಚಿವಾಲಯದಲ್ಲಿ ಅಸ್ತಿತ್ವದಲ್ಲಿರುವ ನಾಲ್ಕು ವಿಭಾಗಳಲ್ಲಿ ಸೇರ್ಪಡೆಯಾಗಿದ್ದು, ಇದರಲ್ಲಿ ರಕ್ಷಣಾ, ರಕ್ಷಣಾ ಸಂಶೋಧನೆ, ರಕ್ಷಣಾ ಉತ್ಪಾದನೆ ಮತ್ತು ಅಭಿವೃದ್ಧಿ ಮತ್ತು ಮಾಜಿ ಸೈನಿಕರ ಕಲ್ಯಾಣ ಇಲಾಖೆಗಳು ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.