ನವದೆಹಲಿ: ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ನಿಯೋಗ ಮಟ್ಟದ ಮಾತುಕತೆ ನಡೆಸಿದ ನಂತರ ಮಾತನಾಡಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ”ಭಾರತ ಮತ್ತು ಅಮೆರಿಕ ಮೂಲಭೂತವಾದಿ ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧ ಹೋರಾಡಲು ಬದ್ಧವಾಗಿದೆ” ಎಂದು ಹೇಳಿದ್ದಾರೆ.
“ಚರ್ಚೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಮತ್ತು ನಾನು ನಮ್ಮ ನಾಗರಿಕರನ್ನು ಮೂಲಭೂತವಾದ ಇಸ್ಲಾಮಿಕ್ ಭಯೋತ್ಪಾದನೆಯಿಂದ ರಕ್ಷಿಸುವ ನಮ್ಮ ಎರಡು ದೇಶಗಳ ಬದ್ಧತೆಯನ್ನು ದೃಢೀಕರಿಸಿದ್ದೇವೆ” ಎಂದು ಅಧ್ಯಕ್ಷ ಟ್ರಂಪ್ ಮಾತುಕತೆಯ ನಂತರ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಾಕಿಸ್ಥಾನದ ಮಣ್ಣಿನಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರನ್ನು ಎದುರಿಸಲು ತಮ್ಮ ದೇಶವೂ ಪಾಕಿಸ್ಥಾನದೊಂದಿಗೆ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
”ಪಾಕಿಸ್ಥಾನದ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರನ್ನು ಮಟ್ಟಹಾಕಲು ಆ ದೇಶದೊಂದಿಗೆ ಉತ್ಪಾದಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದ ಅವರು, ಭಯೋತ್ಪಾದಕರನ್ನು ಮಟ್ಟ ಹಾಕಲು ಬೆಂಬಲವನ್ನು ನೀಡಬೇಕೆಂದು ಪಾಕಿಸ್ಥಾನಕ್ಕೆ ಕರೆ ನೀಡಿದರು.
ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಉಭಯ ನಾಯಕರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು, ಭಾರತೀಯ-ಯುಎಸ್ ಸಂಬಂಧಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.