ವಾಷಿಂಗ್ಟನ್ : ಭಾರತದೊಂದಿಗಿನ ಅಮೆರಿಕದ ಸಂಬಂಧವು ಅಸಾಧಾರಣವಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತಕ್ಕೆ ನೀಡಿದ ಚೊಚ್ಚಲ ಭೇಟಿಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಂಬಂಧದಲ್ಲಿ ಅಮೆರಿಕವು ಸಾಕಷ್ಟು ಪ್ರಗತಿಯನ್ನು ಸಾಧಿಸಲಾಗಿದೆ, ಅಮೆರಿಕಾ ಭಾರತದೊಂದಿಗೆ ದೊಡ್ಡ ಮಟ್ಟದ ವ್ಯವಹಾರವನ್ನು ನಡೆಸಲಿದೆ ಎಂದಿದ್ದಾರೆ.
ಬುಧವಾರ ಭಾರತದಿಂದ ಹಿಂದಿರುಗಿದ ನಂತರ ವಾಷಿಂಗ್ಟನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ವ್ಯಕ್ತಿ, ಶ್ರೇಷ್ಠ ನಾಯಕ. ಭಾರತ ಅದ್ಭುತ ದೇಶ” ಎಂದು ಹೇಳಿದ್ದಾರೆ.
“ನಮಗೆ ಅದ್ಭುತವಾದ ಉಪಚಾರವನ್ನು ಭಾರತದಲ್ಲಿ ನೀಡಲಾಯಿತು ಮತ್ತು ನಾವು ನಿಜವಾಗಿಯೂ ಆನಂದಪಟ್ಟೆವು. ಸಂಬಂಧದ ವಿಷಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. ಭಾರತದೊಂದಿಗಿನ ನಮ್ಮ ಸಂಬಂಧವು ಇದೀಗ ಅಸಾಧಾರಣವಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.
“ನಾವು ಭಾರತದೊಂದಿಗೆ ಸಾಕಷ್ಟು ವ್ಯವಹಾರಗಳನ್ನು ಮಾಡಲಿದ್ದೇವೆ, ಅವರು ಈಗ ಅಮೆರಿಕಕ್ಕೆ ಶತಕೋಟಿ ಡಾಲರ್ಗಳನ್ನು ಕಳುಹಿಸುತ್ತಿದ್ದಾರೆ” ಎಂದು ಟ್ರಂಪ್ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದ್ದಾರೆ.
ಅಧ್ಯಕ್ಷ ಟ್ರಂಪ್ ಫೆಬ್ರವರಿ 24 ರಿಂದ 25 ರವರೆಗೆ ಭಾರತಕ್ಕೆ ಭೇಟಿ ನೀಡಿದರು. ಅವರೊಂದಿಗೆ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಮಗಳು ಇವಾಂಕಾ ಟ್ರಂಪ್, ಅಳಿಯ ಜೇರೆಡ್ ಕುಶ್ನರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಿಯೆನ್ ಸೇರಿದಂತೆ ಅವರ ಆಡಳಿತದ ಉನ್ನತ ಅಧಿಕಾರಿಗಳ ನಿಯೋಗವೂ ಆಗಮಿಸಿತ್ತು.
ಅವರು ಭಾರತ ಪ್ರವಾಸದ ವೇಳೆ ಅಹಮದಾಬಾದ್, ಆಗ್ರಾ ಮತ್ತು ನವದೆಹಲಿಗೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದರು. ಈ ವೇಳೆ 3 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದಕ್ಕೂ ಉಭಯ ಮುಖಂಡರ ನಡುವೆ ಸಹಿ ಬಿದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.