ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಪ್ರತಿಯೊಬ್ಬ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ ಅವರು “ಎಲ್ಲಾ ನಿರಾಶ್ರಿತರಿಗೆ ಪೌರತ್ವ ನೀಡುವವರೆಗೂ ನಾವು ನಿಲ್ಲುವುದಿಲ್ಲ” ಎಂದು ಪುನರುಚ್ಛರಿಸಿದ್ದಾರೆ.
ಟಿಎಂಸಿ ಸೇರಿದಂತೆ ವಿರೋಧ ಪಕ್ಷಗಳು ನಿರಾಶ್ರಿತರು ಮತ್ತು ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸಿವೆ ಎಂದು ಆರೋಪಿಸಿದ ಅವರು, “ಪ್ರತಿಪಕ್ಷಗಳು ಅಲ್ಪಸಂಖ್ಯಾತರನ್ನು ಭಯಭೀತಗೊಳಿಸುತ್ತಿವೆ. ಸಿಎಎ ಪೌರತ್ವವನ್ನು ನೀಡುತ್ತದೆಯೇ ಹೊರತು ಕಸಿದುಕೊಳ್ಳುವುದಿಲ್ಲ ಎಂದು ಅಲ್ಪಸಂಖ್ಯಾತ ಸಮುದಾಯದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಭರವಸೆ ನೀಡುತ್ತೇನೆ. ಇದು ಭಾರತೀಯ ಅಲ್ಪಸಂಖ್ಯಾತರ ಪೌರತ್ವದ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಅವರು ದೃಢಪಡಿಸಿದ್ದಾರೆ.
2021ರ ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವು ಮೂರನೇ ಎರಡರಷ್ಟು ಬಹುಮತವನ್ನು ಗಳಿಸಲಿದೆ ಎಂದು ಹೇಳುವ ಮೂಲಕ ಆ ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ಬಿಜೆಪಿ ರಚಿಸಲಿದೆ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು.
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಶ್ಚಿಮ ಬಂಗಾಳದ ಎರಡನೇ ಅತ್ಯಂತ ಶಕ್ತಿಶಾಲಿ ಪಕ್ಷವಾಗಿ ಹೊರಹೊಮ್ಮಿದೆ. ಇದು 42 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗಳಿಸಿತ್ತು, 22 ಸ್ಥಾನಗಳನ್ನು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಡೆದುಕೊಂಡಿತ್ತು.
ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಆರ್ ನೋಯಿ ಅನ್ನಯ್’ (ಅನ್ಯಾಯವನ್ನು ಇನ್ನು ಸಹಿಸಲ್ಲ) ಅಭಿಯಾನವನ್ನು ಪ್ರಾರಂಭಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.