ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಬುಧವಾರ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಗೆ ಅನುಮೋದನೆಯನ್ನು ನೀಡಿದೆ, ಇದರಿಂದಾಗಿ ಅನಿವಾಸಿ ಭಾರತೀಯರಿಗೆ ಶೇ.100 ವರೆಗೆ ಏರ್ ಇಂಡಿಯಾದಲ್ಲಿ ಷೇರುಗಳನ್ನು ಖರೀದಿಸಲು ಅವಕಾಶ ಸಿಗಲಿದೆ.
ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ವಿಷಯವನ್ನು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ತಮ್ಮ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ರಾಷ್ಟ್ರೀಯ ವಿಮಾನಯಾನದಲ್ಲಿ ಶೇ 100 ರಷ್ಟು ಪಾಲನ್ನು ಮಾರಾಟ ಮಾಡಲು ಸರ್ಕಾರ ಎದುರು ನೋಡುತ್ತಿರುವ ಸಮಯದಲ್ಲಿ ಈ ನಿರ್ಧಾರ ಹೊರಬಿದ್ದಿದೆ.
ಏರ್ ಇಂಡಿಯಾದಲ್ಲಿ ಅನಿವಾಸಿ ಭಾರತೀಯರಿಗೆ ಶೇ 100 ರಷ್ಟು ಪಾಲನ್ನು ಹೊಂದಲು ಸಂಪುಟ ಅನುಮೋದನೆ ನೀಡಿದೆ ಎಂದು ಜಾವ್ಡೇಕರ್ ಹೇಳಿದರು. ಏರ್ ಇಂಡಿಯಾ ಸಂಸ್ಥೆಯಲ್ಲಿ ಅನಿವಾಸಿ ಭಾರತೀಯರಿಗೆ ಶೇ 100 ರಷ್ಟು ಹೂಡಿಕೆಗೆ ಅವಕಾಶ ನೀಡುವುದು ಎಸ್ಒಇಸಿ ಮಾನದಂಡಗಳನ್ನು ಉಲ್ಲಂಘಿಸುವುದಿಲ್ಲ. ಎನ್ಆರ್ಐ ಹೂಡಿಕೆಗಳನ್ನು ದೇಶೀಯ ಹೂಡಿಕೆ ಎಂದು ಪರಿಗಣಿಸಲಾಗುತ್ತದೆ ಎಂದಿದ್ದಾರೆ.
ಜಾಗತಿಕವಾಗಿ ವಿಮಾನಯಾನ ಉದ್ಯಮಗಳು ಅನುಸರಿಸುತ್ತಿರುವ Substantial Ownership and Effective Control (SOEC) ಚೌಕಟ್ಟಿನಡಿಯಲ್ಲಿ, ಒಂದು ನಿರ್ದಿಷ್ಟ ದೇಶದಿಂದ ವಿದೇಶಕ್ಕೆ ಹಾರಾಟ ನಡೆಸುವ ವಿಮಾನದ ಒಡೆತನದ ಬಹು ಪಾಲನ್ನು ಆ ದೇಶದ ಸರ್ಕಾರ ಅಥವಾ ಅದರ ಪ್ರಜೆಗಳು ಹೊಂದಿರಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.