ನವದೆಹಲಿ: ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ಥಾನಕ್ಕೆ ಭಾರತ ದಿಟ್ಟ ಉತ್ತರವನ್ನು ನೀಡಿದೆ. ಭಾರತೀಯ ಸೇನೆಯು ಇತ್ತೀಚೆಗೆ ಕುಪ್ವಾರಾ ವಲಯದ ವಿರುದ್ಧ ದಿಕ್ಕಿನಲ್ಲಿರುವ ಪಾಕಿಸ್ಥಾನ ಸೇನೆಯ ಪೋಸ್ಟ್ಗಳನ್ನು ಗುರಿಯಾಗಿಸಿ ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ ಮತ್ತು ಆರ್ಟಿಲ್ಲರಿ ಶೆಲ್ಸ್ಗಳನ್ನು ಬಳಸಿ ದಾಳಿಯನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಸೇನೆಯು ಫೆಬ್ರವರಿ 24 ಮತ್ತು 25 ರಂದು ಕ್ರಮವಾಗಿ ರಾಜೌರಿ ಮತ್ತು ತಂಗ್ಧರ್ನಲ್ಲಿ ಈ ಪ್ರತಿಕಾರದ ದಾಳಿಯನ್ನು ನಡೆಸಿದೆ ಎಂದು ತಿಳಿದುಬಂದಿದೆ. ಫೆಬ್ರವರಿ 15 ರಂದು ಜಮ್ಮು ಮತ್ತು ಕಾಶ್ಮೀರದ ಹಿರಾನಗರ್ ಸೆಕ್ಟರ್ನಲ್ಲಿ ಪಾಕಿಸ್ಥಾನವು ಕದನ ವಿರಾಮ ಉಲ್ಲಂಘನೆ ಮಾಡಿತ್ತು. ನೀಲಂ ಕಣಿವೆಯ ಮೂಲಕ ಭಯೋತ್ಪಾದಕರನ್ನು ಭಾರತದೊಳಗೆ ನುಸುಳುವಂತೆ ಮಾಡುವ ಸಲುವಾಗಿ ಪಾಕಿಸ್ಥಾನ ಸೇನೆಯು ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿಗಳನ್ನು ನಡೆಸಿತ್ತು.
”ಕುಪ್ವಾರಾ ಸೆಕ್ಟರ್ ಮುಂಭಾಗದ ಪಾಕಿಸ್ಥಾನ ಸೇನೆಯ ಪೋಸ್ಟ್ಗಳನ್ನು ಗುರಿಯಾಗಿಸಿ ಭಾರತೀಯ ಸೇನಾ ಪಡೆಗಳು ಇತ್ತೀಚೆಗೆ ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ ಮತ್ತು ಆರ್ಟಿಲರಿ ಶೆಲ್ಸ್ಗಳನ್ನು ಬಳಕೆ ಮಾಡಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಳನುಸುಳುವಿಕೆಯನ್ನು ಉತ್ತೇಜಿಸಲು ಪಾಕಿಸ್ಥಾನ ಆಗಾಗ್ಗೆ ಕದನ ವಿರಾಮ ಉಲ್ಲಂಘಿಸುತ್ತಿರುವುದಕ್ಕೆ ಪ್ರತಿಕ್ರಿಯೆಯಾಗಿ ಈ ದಾಳಿಯನ್ನು ನಡೆಸಲಾಗಿದೆ” ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 23, 2020 ರವರೆಗೆ ಭಾರತ-ಪಾಕಿಸ್ಥಾನ ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಟ್ಟು 646 ಕದನ ವಿರಾಮ ಉಲ್ಲಂಘನೆಗಳು ನಡೆದಿದೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರು ಲೋಕಸಭೆಯಲ್ಲಿ ಬುಧವಾರ ಹೇಳಿದ್ದಾರೆ.
#WATCH Indian Army Sources: Army troops recently used anti-tank guided missiles & artillery shells to target Pakistan Army positions opposite the Kupwara sector. This was in response to frequent ceasefire violations by Pakistan to push infiltrators into Indian territory in J&K. pic.twitter.com/oHuglG0iQL
— ANI (@ANI) March 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.