ಶ್ರೀನಗರ: 10ರಿಂದ 15 ವಿದ್ಯಾವಂತ ಕಾಶ್ಮೀರಿ ಯುವಕರನ್ನು ಭಯೋತ್ಪಾದಕರು ತಮ್ಮ ಸಂಘಟನೆಗಳಿಗೆ ಸೇರಿಸಿಕೊಂಡಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.
ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿದೆ, ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಉಗ್ರ ಸಂಘಟನೆಗಳು ಆಕರ್ಷಿತರಾಗುತ್ತಿವೆ. ತಮ್ಮ ಸಂಘಟನೆಗಳಿಗೆ ಸೇರಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಗುಪ್ತಚರ ಇಲಾಖೆ ಕೇಂದ್ರಕ್ಕೆ ನೀಡಿರುವ ವರದಿಯಲ್ಲಿ ತಿಳಿಸಿದೆ.
ಹಿಜ್ಬುಲ್ ಮುಜಾಹಿದ್ದೀನ್ನಂತಹ ಕೆಲ ಸಂಘಟನೆಗಳು ತಮ್ಮ ಸದಸ್ಯರ ಭಾವಚಿತ್ರಗಳನ್ನು ಫೇಸ್ಬುಕ್ ಮುಂತಾದ ಕಡೆ ಪ್ರಕಟಗೊಳಿಸಿದ್ದು ಕೂಡ ಆತಂಕಕ್ಕೆ ಕಾರಣವಾಗಿದೆ. ಸೇನೆ ಕೂಡ ಯುವಕರು ಭಯೋತ್ಪಾದನ ಸಂಘಟನೆ ಸೇರುತ್ತಿರುವ ಬಗ್ಗೆ ಕಳವಳವನ್ನು ಈ ಹಿಂದೆಯೇ ವ್ಯಕ್ತಪಡಿಸಿತ್ತು.
ಇದೊಂದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ಹೆಚ್ಚಿನ ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ಸೇನಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ಕೂಡ ಈ ನಿಟ್ಟಿನಲ್ಲಿ ಗಂಭೀರ ಹೆಜ್ಜೆಗಳನ್ನು ಇಡಬೇಕಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.