ನವದೆಹಲಿ: ಮಾರ್ಚ್ 26 ರಂದು ಕೆಲವು ರಾಜ್ಯಗಳ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮಂಗಳವಾರ ಚರ್ಚೆಯನ್ನು ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಗೊಂಡ ಸಮಿತಿಯು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿತು.
ಪಕ್ಷವು ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಏಪ್ರಿಲ್ನಲ್ಲಿ ಖಾಲಿಯಾಗಲಿರುವ 55 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 26 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಮಾರ್ಚ್ 13 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರನ್ನು ಭೇಟಿಯಾದ ನಂತರ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ದಿನವೇ ಸಭೆ ನಡೆಯಿತು. ಸಿಂಧಿಯಾ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರುವ ಮತ್ತು ಮಧ್ಯಪ್ರದೇಶದಿಂದ ರಾಜ್ಯಸಭಾ ಟಿಕೆಟ್ ಪಡೆಯುವ ನಿರೀಕ್ಷೆ ಇದೆ. ಅಲ್ಲಿ ಮೂರು ಸ್ಥಾನಗಳಲ್ಲಿ ಚುನಾವಣೆ ನಡೆಯಲಿದೆ.
ಮತದಾನ ಮುಕ್ತಾಯಗೊಂಡ ಒಂದು ಗಂಟೆಯ ನಂತರ ಮಾರ್ಚ್ 26 ರ ಸಂಜೆ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.