ನವದೆಹಲಿ: ಸಂಸತ್ ಅಧಿವೇಶನದಲ್ಲಿ ದೆಹಲಿ ಹಿಂಸಾಚಾರದ ಕುರಿತು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿರುವ ಪ್ರತಿಪಕ್ಷಗಳಿಗೆ, ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಮಾತಿನ ಮೂಲಕವೇ ಛಾಟಿ ಬೀಸಿದ್ದಾರೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಕೇಂದ್ರ ಸರ್ಕಾರ ಕೇವಲ 36 ಗಂಟೆಗಳಲ್ಲಿಯೇ ದೆಹಲಿಯಲ್ಲಿ ವಿದ್ರೋಹಿಗಳು ನಡೆಸಿದ ದೊಂಬಿ, ಹಿಂಸಾಚಾರವನ್ನು ಸಮರ್ಥವಾಗಿ ಹತ್ತಿಕ್ಕಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.
ಸಂಸತ್ನಲ್ಲಿ ನಡೆದ ಚರ್ಚೆಯ ವೇಳೆ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರ ದೆಹಲಿ ಹಿಂಸಾಚಾರದ ವೇಳೆ ತೆಗೆದುಕೊಂಡ ದಿಟ್ಟ ಕ್ರಮಗಳ ಬಗ್ಗೆ ಮೆಚ್ಚುಗೆ ಸೂಚಿಸಿ, ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.
ದೆಹಲಿಯ ಗಲಭೆ ಕುರಿತಂತೆ ಮೋದಿ, ಅಮಿತ್ ಶಾ ಮೇಲಿನ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯ ಪೊಲೀಸರ ಜೊತೆಗೆ ನಿರಂತರ ಸಂಪರ್ಕ ಸಾಧಿಸಿ, ಕೇವಲ 36 ಗಂಟೆಗಳಲ್ಲಿಯೇ ಪರಿಸ್ಥಿತಿಯನ್ನು ಸಂಪೂರ್ಣ ಹತೋಟಿಗೆ ತರುವಲ್ಲಿ ಯಶಸ್ಸನ್ನು ಪಡೆದಿದ್ದಾರೆ.
ಶಹೀನ್ಬಾಗ್ನಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಭಾಷಣದ ಮರುದಿನದಿಂದಲೇ ಹಿಂಸಾಚಾರ ಭುಗಿಲೆದ್ದಿದೆ, ಹೀಗಾಗಿ ಇದರ ಹಿಂದಿರುವ ಕಾಣದ ಕೈಗಳು ಯಾರದ್ದು ಎಂದು ಅರಿವಾಗುತ್ತದೆ. ಮುಗ್ಧ ಜನರನ್ನು ದಾರಿ ತಪ್ಪಿಸಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಹಿಂಸಾಚಾರಕ್ಕೆ ಪ್ರಚೋದನೆ ನೀಡಿದವರೇ ಇಂದು ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಿದ್ದ ಸಂದರ್ಭದಲ್ಲಿ ನಡೆದಷ್ಟು ಗಲಭೆಗಳು, ಮೋದಿ ಆಡಳಿತದಲ್ಲಿ ನಡೆದಿಲ್ಲ. ಕಾಂಗ್ರೆಸ್ ಪಕ್ಷ ಗಲಭೆ, ಹಿಂಸಾಚಾರಗಳನ್ನು ಪೋಷಿಸುವ ಕೆಲಸ, ಪ್ರಚೋದನೆ ನೀಡುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದಿದ್ದಾರೆ.
Kind of radicalism at Delhi protests is evident in how kids are made to say on videos that they will kill PM, HM
Congress Module of Riot Engineering, in play for decades, has been busted in Parliament. I congratulate Sh @AmitShah for controlling riot & unraveling conspiracy pic.twitter.com/s4avBbHZVS
— Tejasvi Surya (@Tejasvi_Surya) March 11, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.