ಚೆನ್ನೈ: ಭಾರತೀಯ ಜನತಾ ಪಾರ್ಟಿಯು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ (ಎನ್ಸಿಎಸ್ಸಿ) ಉಪಾಧ್ಯಕ್ಷ ಎಲ್. ಮುರುಗನ್ ಅವರನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ತಮಿಳುಸಾಯಿ ಸೌಂದರರಾಜನ್ ಈ ಹಿಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು ಆದರೆ ಸೆಪ್ಟೆಂಬರ್ 1 ರಂದು ತೆಲಂಗಾಣ ರಾಜ್ಯಪಾಲರಾಗಿ ನೇಮಕಗೊಂಡರು ಮತ್ತು ಅಂದಿನಿಂದ ಈ ಸ್ಥಾನವು ಖಾಲಿಯಾಗಿತ್ತು. ಇದೀಗ ಈ ಸ್ಥಾನಕ್ಕೆ ಮುರುಗನ್ ನೇಮಕ ನಡೆದಿದೆ.
ಎಲ್. ಮುರುಗನ್ ಅವರನ್ನು ಎನ್ಸಿಎಸ್ಸಿ ಉಪಾಧ್ಯಕ್ಷರನ್ನಾಗಿ ನೇಮಿಸುವ ಮೊದಲು ಅವರು ಮದ್ರಾಸ್ ಹೈಕೋರ್ಟ್ನಲ್ಲಿ ವಕೀಲಿ ವೃತ್ತಿ ಮಾಡುತ್ತಿದ್ದರು. ಡಾ.ಅಂಬೇಡ್ಕರ್ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಪದವಿ ಪಡೆದುಕೊಂಡಿರುವ ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಅಂತರರಾಷ್ಟ್ರೀಯ ಕಾನೂನು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ.
ಮುರುಗನ್ ತನ್ನ ವಿದ್ಯಾರ್ಥಿ ದಿನಗಳಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಸಕ್ರಿಯ ಸದಸ್ಯರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.