ನವದೆಹಲಿ: ಕಾಂಗ್ರೆಸ್ಗೆ ಗುಡ್ಬೈ ಹೇಳಿ ಬಿಜೆಪಿಯತ್ತ ಮುಖ ಮಾಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿಯಾಗಿದ್ದಾರೆ.
ಕಾಂಗ್ರೆಸ್ನಿಂದ ಬೇಸತ್ತು ನಿನ್ನೆಯಷ್ಟೇ ಬಿಜೆಪಿ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದ ಸಿಂಧಿಯಾ, ಇಂದು ಪಕ್ಷದ ಅನೇಕ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭ ಶಾ ಅವರನ್ನೂ ಭೇಟಿ ಮಾಡಿದ್ದು, ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಸಿಂಧಿಯಾ ಆಗಮನದಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಿರುವುದಾಗಿ ಶಾ ಹೇಳಿದ್ದಾರೆ.
ಇದಕ್ಕೂ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿ ಮಾಡಿದ್ದ ಸಿಂಧಿಯಾ ಹಲವು ಪ್ರಮುಖ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.
ಸಿಂಧಿಯಾ ಬಿಜೆಪಿ ಸೇರಿದ ನಂತರ ಪ್ರಧಾನಿ ಮೋದಿ, ಶಾ ಅಥವಾ ಇನ್ಯಾವುದೇ ಬಿಜೆಪಿಯ ಪ್ರಮುಖರು ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳನ್ನು ತಿಳಿಸದ್ದನ್ನು ವ್ಯಂಗ್ಯ ಮಾಡಿದ್ದ ಕೆಲವು ಕಾಂಗ್ರೆಸ್ ನಾಯಕರು, ಇದು ಬಿಜೆಪಿ ಸಿಂಧಿಯಾಗೆ ಮಾಡಿದ ಅವಮಾನ ಎಂದು ಹಾಸ್ಯ ಮಾಡಿದ್ದರು. ಆದರೆ ಇದೀಗ ಶಾ- ಸಿಂಧಿಯಾ ಭೇಟಿ ಕಾಂಗ್ರೆಸ್ಸಿಗರ ಬಾಯಿ ಮುಚ್ಚಿಸಿದೆ ಎಂದರೂ ತಪ್ಪಾಗಲಾರದು.
Met Shri @JM_Scindia ji.
I am sure his induction into the party will further strengthen BJP’s resolve to serve the people of Madhya Pradesh. pic.twitter.com/jrxAAWrjyl
— Amit Shah (@AmitShah) March 12, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.