ನವದೆಹಲಿ: ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರದ ಸಂದರ್ಭದಲ್ಲಿ ಹತ್ಯೆಗೊಳಗಾಗದ ಇಂಟೆಲಿಜೆನ್ಸ್ ಬ್ಯೂರೋ ಸಿಬ್ಬಂದಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಸೆಲ್ ಗುರುವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಕಳೆದ ತಿಂಗಳು ನಡೆದ ಗಲಭೆಯಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಪ್ರಸ್ತುತ ಬಂಧಿತನಾಗಿರುವ ವ್ಯಕ್ತಿಯನ್ನು ಸಲ್ಮಾನ್ ಅಲಿಯಾಸ್ ನನ್ಹೆ ಎಂದು ಗುರುತಿಸಲಾಗಿದೆ.
ದೆಹಲಿ ಗಲಭೆಯ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಅಂಕಿತ್ ಅವರ ಮೃತದೇಹ ಫೆಬ್ರವರಿ 27 ರಂದು ಈಶಾನ್ಯ ದೆಹಲಿಯ ಚಂದ್ ಬಾಗ್ ಪ್ರದೇಶದ ಅವರ ಮನೆಯ ಸಮೀಪವಿರುವ ಚರಂಡಿಯಲ್ಲಿ ಪತ್ತೆಯಾಗಿತ್ತು.
ಅಂಕಿತ್ ಶರ್ಮಾ ಅವರ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಳೆದ ವಾರ ಆಮ್ ಆದ್ಮಿ ಪಕ್ಷದ (ಎಎಪಿ) ಉಚ್ಛಾಟಿತ ಕೌನ್ಸಿಲರ್ ತಾಹಿರ್ ಹುಸೇನ್ನನ್ನು ವಶಕ್ಕೆ ಪಡೆದುಕೊಂಡಿದ್ದರು.
ಹುಸೇನ್ ವಿರುದ್ಧದ ಎಫ್ಐಆರ್ನಲ್ಲಿ, ಶರ್ಮಾ ಹತ್ಯೆ ಮತ್ತು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆಯನ್ನು ಈತ ಪ್ರಚೋದನೆಯನ್ನು ನೀಡಿದ್ದಾಗಿ ಪೊಲೀಸರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಾಹೀರ್ ಹುಸೇನ್ ಅನ್ನು ಮಾರ್ಚ್ 6 ರಂದು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಈತನ ಜಾಮೀನು ಅರ್ಜಿಯನ್ನು ಕಾರ್ಕಾರ್ಡೂಮಾ ನ್ಯಾಯಾಲಯ ಈ ಹಿಂದೆ ತಿರಸ್ಕರಿಸಿತ್ತು.
26 ವರ್ಷದ ಅಂಕಿತ್ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅಂಕಿತ್ ಕುಟುಂಬದ ದೂರಿನಂತೆ ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.