ನವದೆಹಲಿ: ಬಿಕ್ಕಟ್ಟಿನಿಂದ ಬಳಲುತ್ತಿರುವ ಯೆಸ್ ಬ್ಯಾಂಕ್ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಾಯನ್ಸ್ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬಯಿಯಲ್ಲಿರುವ ತನಿಖಾ ಸಂಸ್ಥೆಯ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಅಂಬಾನಿಗೆ ತಿಳಿಸಲಾಗಿದೆ. ಯೆಸ್ ಬ್ಯಾಂಕ್ ನೀಡಿದ ಸಾಲಗಳಿಗೆ ಸಂಬಂಧಿಸಿದಂತೆ ಇವರನ್ನು ಪ್ರಶ್ನಿಸಲು ನಿರ್ಧರಿಸಲಾಗಿದೆ. ಯೆಸ್ ಬ್ಯಾಂಕ್ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ನಿಷೇಧವನ್ನು ವಿಧಿಸಿತ್ತು ಮತ್ತು ಬ್ಯಾಂಕಿನ ಆರ್ಥಿಕ ಆರೋಗ್ಯ ತೀವ್ರವಾಗಿ ಹದಗೆಟ್ಟ ನಂತರ ಬಳಕೆದಾರರು ತಿಂಗಳಿಗೆ 50,000 ರೂ.ಮಾತ್ರ ವಿದ್ ಡ್ರಾ ಮಾಡುವಂತೆ ಸೂಚಿಸಿತ್ತು.
ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಅಧಿಕಾರಿಗಳ ಮುಂದೆ ಹಾಜರಾಗಲು ಅಂಬಾನಿ ಹೆಚ್ಚಿನ ಸಮಯವನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವಾರದ ಕೊನೆಯಲ್ಲಿ ಇತರ ರಿಲಾಯನ್ಸ್ ಗ್ರೂಪ್ ಅಧಿಕಾರಿಗಳನ್ನು ವಿಚಾರಣೆಗೆ ಕರೆಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಯೆಸ್ ಬ್ಯಾಂಕ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಅದರ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಈಗಾಗಲೇ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.