ಶಿರಡಿ : ಶಿರಡಿಯ ಸಾಯಿಬಾಬಾ ದೇವಸ್ಥಾನದಲ್ಲಿ ಆಗಸ್ಟ್ 29, ಸೆಪ್ಟೆಂಬರ್ 13, 18 ಮತ್ತು 25 ರಂದು ಸಾಯಿಬಾಬಾ ದರ್ಶನವು 24 ಗಂಟೆಗಳ ಕಾಲ ದೊರಕಲಿದೆ ಎಂದು ಸಾಯಿಬಾಬಾ ಸಂಸ್ಥಾನ ಟ್ರಸ್ಟ್ನ ಹಿರಿಯ ಅಧಿಕಾರಿ ರಾಜೇಂದ್ರ ಜಾದವ್ ತಿಳಿಸಿದ್ದಾರೆ.
ಸಿಂಹಸ್ತ ಪರವನಿಯ ಸಮಯದಲ್ಲಿ ಹೆಚ್ಚಿನ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ನಾಸಿಕ್ ಹಾಗೂ ಗೋದವಾರಿ ಕುಂಭಮೇಳಗಳಿಗೆ ದೇಶದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಜನರು ಶಿರಡಿಗೂ ಭೇಟಿ ನೀಡುವ ನಿರೀಕ್ಷೆಯಿದ್ದು, ಭಕ್ತರ ಅನುಕೂಲಕ್ಕಾಗಿ ಈ ನಾಲ್ಕು ದಿನಗಳಂದು 24 ಗಂಟೆ ದರ್ಶನಕ್ಕೆ ಕ್ರಮ ಕೈಗೊಳ್ಳಲಾಗಿದೆ.
ರಾತ್ರಿಯಿಡೀ ಪ್ರಸಾದಾಲಯವನ್ನೂ ತೆರೆದಿಡುವ ಪ್ರಸ್ತಾಪವಿದ್ದು, ಜನರ ಅನುಕೂಲಕ್ಕೆ ತಕ್ಕಂತೆ ನಿರ್ಧಾರ ಕೈಗೊಳ್ಳಲಾಗುವುದು.
ಹಿರಿಯ ನಾಗರಿಕರಿಗೆ, ಆರೋಗ್ಯ ಸಮಸ್ಯೆಯಿರುವ ವ್ಯಕ್ತಿಗಳಿಗೆ ಸಾರಿಗೆ ಸಂಬಂಧಿಸಿದಂತೆ ವಿಶೇಷ ವ್ಯವಸ್ಥೆ ಟ್ರಸ್ಟ್ನ ವತಿಯಿಂದ ಮಾಡಲಾಗುವುದು ಎಂದೂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.