ನವದೆಹಲಿ: ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಕೊರೋನಾ ಮುಕ್ತ ಭಾರತಕ್ಕಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲರಿಗೂ ಗೌರವ ಸಮರ್ಪಣೆ ಮಾಡುವ ಸಂಕೇತವಾಗಿ ಸಂಸ್ಥಾಪನಾ ದಿನದಂದು ಒಪ್ಪತ್ತಿನ ಉಪವಾಸವನ್ನು ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.
ಪ್ರಸ್ತುತ ದೇಶವ್ಯಾಪಿಯಾಗಿ ಜಾರಿಯಲ್ಲಿರುವ ಲಾಕ್ ಡೌನ್ ಕಾರಣದಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಬೆಂಬಲವನ್ನು ಸೂಚಿಸುವ ಸಲುವಾಗಿ ಮತ್ತು ಪೊಲೀಸ್, ವೈದ್ಯರು ಮತ್ತು ಶುಶ್ರೂಷಕಿಯರು, ಪೌರ ಕಾರ್ಮಿಕರು, ಬ್ಯಾಂಕ್ ಮತ್ತು ಅಂಚೆ ನೌಕರರು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರು ಇವರುಗಳಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನದಂದು ಒಂದು ಹೊತ್ತಿನ ಊಟ ಅಥವಾ ಒಂದು ದಿನದ ಊಟವನ್ನು ತ್ಯಜಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿಯು ಇಂದು ತನ್ನ 40ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದೆ.
ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ಕೆಲವೊಂದು ನಿರ್ದೇಶನಗಳನ್ನು ಹೊರಡಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಟ್ವೀಟ್ ಮಾಡಿದ್ದು, ಪ್ರತಿಯೊಬ್ಬರು ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
“ನಾವಿಂದು ನಮ್ಮ ಪಕ್ಷದ 40ನೇ ಸಂಸ್ಥಾಪನ ದಿನವನ್ನು ಆಚರಿಸಿಕೊಳ್ಳುತ್ತಿದ್ದೇವೆ. ಭಾರತ ಕೋವಿಡ್-19 ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಹೊರಡಿಸಿರುವ ನಿರ್ದೇಶನಗಳನ್ನು ಪಾಲಿಸುವಂತೆ, ಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿಕೊಳ್ಳುತ್ತೇನೆ. ಬನ್ನಿ, ಒಂದಾಗಿ ಕೋವಿಡ್-19 ಮುಕ್ತ ಭಾರತವನ್ನು ನಿರ್ಮಾಣ ಮಾಡೋಣ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಅಗತ್ಯ ಇರುವವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವಂತೆ, ಮನೆಯಲ್ಲೇ ತಯಾರಿಸಿದ ಮುಖಗವಸುಗಳನ್ನು ವಿತರಿಸುವಂತೆ ಮತ್ತು ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು, ಸ್ವಚ್ಛತಾ ಕಾರ್ಮಿಕರು, ಪೊಲೀಸರು, ಬ್ಯಾಂಕ್ ಮತ್ತು ಅಂಚೆ ಸಿಬ್ಬಂದಿಗಳಿಗೆ ಬೆಂಬಲವನ್ನು ಸೂಚಿಸಿ ಸಲುವಾಗಿ ಜನರಿಂದ ಸಹಿ ಸಂಗ್ರಹ ಮಾಡುವಂತೆ ಜೆ ಪಿ ನಡ್ಡಾ ಅವರು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
भाजपा का 40वां स्थापना दिवस ऐसे समय में आया है, जब देश COVID-19 से लड़ रहा है। मैं कार्यकर्ताओं से आग्रह करता हूं कि वे पार्टी अध्यक्ष @JPNadda जी के दिशानिर्देशों का पालन करें और सोशल डिस्टेंसिंग के साथ जरूरतमंदों की मदद करें। एकजुट होकर भारत को COVID-19 से मुक्त करें। #BJPat40 pic.twitter.com/hvI6ZxNM4B
— Narendra Modi (@narendramodi) April 6, 2020
ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಅವರು ಹೇಳಿದ್ದಾರೆ.
ಸಂಕಷ್ಟದಲ್ಲಿರುವ ಜನರಿಗೆ ಬೆಂಬಲವನ್ನು ಸೂಚಿಸುವ ಸಲುವಾಗಿ ನಾವು ಸಂಸ್ಥಾಪನಾ ದಿನದಂದು ಒಂದು ಹೊತ್ತಿನ ಊಟವನ್ನು ತಿಳಿಸಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.