ಬೆಂಗಳೂರು: ಕೊರೋನವೈರಸ್ ವಿರುದ್ಧದ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಕರ್ನಾಟಕ ಸರ್ಕಾರ ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿ ಹೋರಾಟವನ್ನು ಇನ್ನಷ್ಟು ಬಲಗೊಳಿಸಿದೆ.
ಬೆಂಗಳೂರಿನಲ್ಲಿ 108 ಅಂಬ್ಯುಲೆನ್ಸ್ಗಳು ಕೇವಲ ಕೋವಿಡ್-19 ರೋಗಿಗಳಿಗೆ ಮಾತ್ರ ಮೀಸಲಾಗಿದೆ. ಈ ಹಿನ್ನೆಲೆಯಲ್ಲಿ 100 ಉಬೇರ್, ಓಲಾ ಕ್ಯಾಬ್ಗಳನ್ನು ಅಂಬ್ಯುಲೆನ್ಸ್ಗಳಾಗಿ ಪರಿವರ್ತನೆ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಘೋಷಣೆ ಮಾಡಿದೆ.
ಕೊರೋನಾಗೆ ಸಂಬಂಧಿಸದ ರೋಗಿಗಳಿಗೆ 100 ಕ್ಯಾಬ್ಗಳನ್ನು ಅಂಬ್ಯುಲೆನ್ಸ್ಗಳಾಗಿ ಪರಿವರ್ತಿಸಿ ಬಳಕೆ ಮಾಡಲು ನಿರ್ಧರಿಸಲಾಗಿದೆ. ಈ ಸೇವೆಯನ್ನು ಜನರು ಆಯಾ ಕ್ಯಾಬ್ಗಳ ಆಪ್ಗಳ ಮೂಲಕ ಅಥವಾ 9154153917/19ಗೆ ಕರೆ ಮಾಡಿ ಪಡೆಯಬಹುದಾಗಿದೆ. ಬೆಂಗಳೂರು ನಗರದೊಳಗೆ ಮಾತ್ರ ಈ ಸೇವೆ ಲಭ್ಯವಿರಲಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 6 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸಂಖ್ಯೆ 181 ಕ್ಕೆ ಏರಿದೆ. ಇಂದಿನವರೆಗೆ 28 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
#Covid19 ಸೋಂಕು ಇಲ್ಲದವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಲು ಸಾರ್ವಜನಿಕ ವಾಹನ ಸೌಲಭ್ಯಗಳಿಲ್ಲದೆ ಅನಾನುಕೂಲವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇಂತಹ ತುರ್ತು ಸಂದರ್ಭದಲ್ಲಿ ಸೇವೆ ನೀಡಲು @Olacabs ಮತ್ತು @Uber ಕಂಪನಿಗಳು ಒಪ್ಪಿಕೊಂಡಿದ್ದು, ಇವರ ಸೇವೆಗಳಿಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಿದೆನು. pic.twitter.com/VWTLgYTHWe
— B Sriramulu (@sriramulubjp) April 7, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.