ಬೆಂಗಳೂರು: ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ತನ್ನ ಬಜೆಟ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡನೆ ಮಾಡಿದ್ದು, ಆರೋಗ್ಯ ಕ್ಷೇತ್ರ ಮತ್ತು ಗೋ ಸಂರಕ್ಷಣೆ ಗೂ ಹಣ ಮೀಸಲಿಟ್ಟಿದೆ. ಪ್ರಸ್ತುತ ಕೊರೋನಾದಿಂದ ಕಂಗೆಟ್ಟಿರುವ ಸಮಾಜವನ್ನು ರಕ್ಷಿಸುವ ನಿಟ್ಟಿನಲ್ಲಿ ಸುಮಾರು 49 ಕೋಟಿ ರೂ. ಗಳನ್ನು ಮೀಸಲಿಟ್ಟಿದೆ.
ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ ಅವರು ಈ ಬಜೆಟ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡಿಸಿದ್ದು, ಸುಮಾರು 11 ಸಾವಿರ ಕೋಟಿ ರೂ. ಗಳ ಬಜೆಟ್ ಇದಾಗಿದೆ ಎಂದು ತಿಳಿಸಿದೆ.
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ 20 ಕೋ. ರೂ. ವೆಚ್ಚದಲ್ಲಿ ಮಕ್ಕಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಇದರ ನಿರ್ವಹಣೆಗೆ 16 ಕೋ. ಮೀಸಲಿಟ್ಟಿದ್ದು, ಉಚಿತ ಡಯಾಲಿಸಿಸ್ ಸೇವೆಯನ್ನು ನೀಡಲಾಗುವುದಾಗಿಯೂ ಬಿಬಿಎಂಪಿ ಮಾಹಿತಿ ನೀಡಿದೆ. ಅಲ್ಲದೆ ಗೋವುಗಳ ಸಂರಕ್ಷಣೆಗೂ ಮುಂದಾಗಿರುವ ಬಿಬಿಎಂಪಿ, ಅವುಗಳಿಗೆ ಮೇವು ಒದಗಿಸುವ ನಿಟ್ಟಿನಲ್ಲಿ 50 ಲಕ್ಷ ರೂ. ಗಳನ್ನು ಮೀಸಲಿಟ್ಟಿರುವುದಾಗಿಯೂ ತಿಳಿಸಿದೆ.
ಮೇಯರ್ ಗೌತಮ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ʼಇಂದು ಬಿಬಿಎಂಪಿ ಬಜೆಟ್ 2020 ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡಿಸಲಾಯಿತು. ಮುಖ್ಯ ಕಚೇರಿಯಿಂದ ಲೈವ್ ಸ್ಟ್ರೀಮ್ ಮೂಲಕ ವಲಯ ಕಛೇರಿಗಳೊಂದಿಗೆ ಹಂಚಿಕೊಳ್ಳಲಾಯಿತುʼ ಎಂದಿದ್ದಾರೆ.
#BBMPBudget2020 was presented today through video-conference. The session was streamed live from the head office to all the zonal offices.
Budget highlights and details to follow. Watch this space! pic.twitter.com/jGqgh7Ku29
— M Goutham Kumar (@BBMP_MAYOR) April 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.