ನವದೆಹಲಿ: ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ವಲಯ ಮತ್ತು ಬುಸಿನೆಸ್ ಪ್ರೋಸೆಸ್ ಔಟ್ ಸೋರ್ಸಿಂಗ್ ಸಂಸ್ಥೆಗಳ ಉದ್ಯೋಗಿಗಳಿಗೆ ಜುಲೈ 31 ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಈ ಹಿಂದೆ ಕೇಂದ್ರ ಸರಕಾರವು ಏಪ್ರಿಲ್ 30ರವರೆಗೆ ಸಾಫ್ಟ್ವೇರ್ ವೃತ್ತಿಪರರಿಗೆ ವರ್ಕ್ ಫ್ರಮ್ ಹೋಮ್ ಅವಕಾಶವನ್ನು ಕಲ್ಪಿಸಿಕೊಟ್ಟಿತ್ತು. ಇದೀಗ ರಾಜ್ಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ವೇಳೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಜುಲೈ 31ರವರೆಗೆ ಮನೆಯಲ್ಲಿ ಕಾರ್ಯನಿರ್ವಹಿಸುವ ಅವಕಾಶದ ಬಗ್ಗೆ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯ ಸಚಿವರುಗಳಿಗೂ ಕೂಡ ವರ್ಕ್ ಫ್ರಮ್ ಹೋಮ್ ಹೊಸ ನಿಯಮ ಆಗಿರಲಿದೆ ಎಂದು ಅವರು ಹೇಳಿದ್ದರು.
“ಎಪ್ರಿಲ್ 30ರವರೆಗೆ ಇದ್ದ ವರ್ಕ್ ಫ್ರಂ ಹೋಮ್ ಅವಕಾಶವನ್ನು ಜುಲೈ 31 ರವರೆಗೆ ವಿಸ್ತರಣೆ ಮಾಡಲಾಗುತ್ತದೆ” ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಬಳಿಕದ ಸ್ಥಿತಿಗತಿಯನ್ನು ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಸಚಿವರು ನಿರ್ಧಾರವನ್ನು ನಾಸ್ಕಾಂ ಸ್ವಾಗತಿಸಿದೆ. ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಈ ನಿರ್ಧಾರ ಐಟಿ ಮತ್ತು ಬಿಪಿಒ ಸಂಸ್ಥೆಗಳಿಗೆ ತಮ್ಮ ಕಾರ್ಯಪಡೆಯನ್ನು ಮತ್ತೆ ಕಾರ್ಯಕ್ಷೇತ್ರಕ್ಕೆ ಕರೆಸಿಕೊಳ್ಳಲು ಕಾರ್ಯತಂತ್ರ ರೂಪಿಸಲು ಸಹಾಯ ಮಾಡಲಿದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.