ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆಯನ್ನು ರದ್ದುಗೊಳಿಸಿರುವುದು ಜಮ್ಮು ಮತ್ತು ಕಾಶ್ಮೀರದ ಆಡಳಿತ ಸುಪ್ರೀಂಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದೆ.
ಇಂಟರ್ನೆಟ್ ಸೇವೆ ಮೂಲಭೂತ ಹಕ್ಕು ಅಲ್ಲ ಎಂದು ಅದು ಸುಪ್ರೀಂಕೋರ್ಟ್ನಲ್ಲಿ ವಾದಿಸಿದೆ.
ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ 4ಜಿ ಇಂಟರ್ನೆಟ್ ಸೇವೆಯನ್ನು ಪುನರಾರಂಭ ಮಾಡುವಂತೆ ಕೋರಿ ಫೌಂಡೇಶನ್ ಫಾರ್ ಮೀಡಿಯಾ ಪ್ರೊಫೆಷನಲ್ ಸುಪ್ರೀಂಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿತ್ತು.
ಇದಕ್ಕೆ ಪ್ರತಿಕ್ರಿಯೆಯನ್ನು ನೀಡಿರುವ ಜಮ್ಮು-ಕಾಶ್ಮೀರದ ಆಡಳಿತವು, ಇಂಟರ್ನೆಟ್ ಹಕ್ಕುಗಳನ್ನು ಲಭ್ಯಗೊಳಿಸುತ್ತದೆಯೇ ಹೊರತು ಅದುವೇ ಹಕ್ಕಲ್ಲ. ಈಗಿರುವ 2ಜಿ ಇಂಟರ್ನೆಟ್ನ ವೇಗ ಮಾಹಿತಿ ಮತ್ತು ಜ್ಞಾನವನ್ನು ಹಂಚಿಕೊಳ್ಳಲು, ಉಪಯೋಗಿಸಿಕೊಳ್ಳಲು ಮತ್ತು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ ಎಂದಿದೆ.
ಈಗಾಗಲೇ ಕೇಂದ್ರ ಸರಕಾರ ಜಮ್ಮು-ಕಾಶ್ಮೀರದಲ್ಲಿ 2ಜಿ ಇಂಟರ್ನೆಟ್ ಸೇವೆಯನ್ನು ನೀಡಿದೆ. ಆದರೆ ಇದುವರೆಗೆ ಫೋರ್ಸ್ ಇಂಟರ್ನೆಟ್ ಸೇವೆಯನ್ನು ಅಲ್ಲಿ ನೀಡಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.