ನವದೆಹಲಿ: ಭಾರತದ ಏಕತೆ ಮತ್ತು ಸಮಗ್ರತೆಯನ್ನು ಉತ್ತೇಜಿಸುವ ಸಲುವಾಗಿ ನೀಡಲಾದ ಕೊಡುಗೆಯನ್ನು ಗುರುತಿಸಲು ಸರ್ದಾರ್ ಪಟೇಲ್ ರಾಷ್ಟ್ರೀಯ ಏಕತಾ ಪ್ರಶಸ್ತಿಯನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ ಹೆಸರಿನಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿ ಭಾರತ ಸರ್ಕಾರ ಸ್ಥಾಪಿಸಿದೆ.
ಈ ಕ್ಷೇತ್ರದಲ್ಲಿ ವ್ಯಕ್ತಿಗಳು ಅಥವಾ ಸಂಸ್ಥೆಗಳು ತಾವು ನೀಡಿದ ಗಮನಾರ್ಹ ಮತ್ತು ಸ್ಪೂರ್ತಿದಾಯಕ ಕೊಡುಗಾಗಿ ಪ್ರಶಸ್ತಿ ಪಡೆಯಲು ಅರ್ಹವಾಗಿವೆ. ಪ್ರಶಸ್ತಿಯು ಬಲವಾದ ಮತ್ತು ಏಕೀಕೃತ ಭಾರತದ ಮೌಲ್ಯವನ್ನು ಬಲಪಡಿಸುತ್ತದೆ.
ಈ ನಿಟ್ಟಿನಲ್ಲಿ 2019 ರ ಸೆಪ್ಟೆಂಬರ್ 20 ರಂದು ಪ್ರಶಸ್ತಿಗಾಗಿ ನಾಮನಿರ್ದೇಶನಗಳು / ಶಿಫಾರಸುಗಳನ್ನು ಕೋರಿ ಅಧಿಸೂಚನೆ ಹೊರಡಿಸಲಾಗಿತ್ತು.
ಇದೀಗ ಆನ್ಲೈನ್ನಲ್ಲಿ ನಾಮಪತ್ರಗಳ ಆಹ್ವಾನವನ್ನು ಪೋರ್ಟಲ್ ಮೂಲಕ 2020 ಜೂನ್ 30 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.