ನವದೆಹಲಿ: ಪದೇ ಪದೇ ಭಾರತದ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿರುವ ಪಾಕಿಸ್ಥಾನಕ್ಕೆ ಭಾರತ ಖಡಕ್ ಎಚ್ಚರಿಕೆಯನ್ನು ರವಾನಿಸಿದೆ. ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಗಡಿಯಲ್ಲಿ ಪಾಕಿಸ್ಥಾನ ತನ್ನ ಕುಚೋದ್ಯವನ್ನು ಮುಂದುವರೆಸಿದೆ.
ಪಾಕಿಸ್ಥಾನ ಪ್ರಾಯೋಜಿತ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರ ತ್ಯಾಗಕ್ಕೆ ಪ್ರತೀಕಾರವನ್ನು ತಿಳಿಸುವುದಿಲ್ಲ ಎಂದು ಸೇನಾ ಮುಖ್ಯಸ್ಥ ಜನರಲ್ ನರವಾಣೆ ಅವರು ನೆರೆಯ ಶತ್ರು ರಾಷ್ಟ್ರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.
ಉತ್ತರ ಕಾಶ್ಮೀರದ ಹಂಡ್ವಾರದಲ್ಲಿ ಭಯೋತ್ಪಾದನೆ ವಿರೋಧಿ ಕಾರ್ಯಾಚರಣೆ ಸಮಯದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.
“ಪಾಕಿಸ್ಥಾನದ ನಿರಂತರ ಕದನ ವಿರಾಮ ಉಲ್ಲಂಘನೆ ಮತ್ತು ಭಯೋತ್ಪಾದಕರನ್ನು ಬೆಂಬಲಿಸುವ ದುಸ್ಸಾಹಸಕ್ಕೆ ಭಾರತೀಯ ಸೇನೆಯು ಸಮರ್ಪಕವಾದ ಪ್ರತ್ಯುತ್ತರವನ್ನು ನೀಡಲಿದೆ” ಎಂದಿದ್ದಾರೆ.
“ಪಾಕಿಸ್ಥಾನ ಪ್ರಯೋಜಕತ್ವದ ಭಯೋತ್ಪಾದನೆಯನ್ನು ಬಿಟ್ಟು ಬಿಡುವವರೆಗೂ, ನಾವು ತಕ್ಕ ಪ್ರತಿಕ್ರಿಯೆಯನ್ನು ನೀಡುತ್ತಲೇ ಇರುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.