ನವದೆಹಲಿ : JEE ಅಡ್ವಾನ್ಸ್ಡ್ 2020 ಎಕ್ಸಾಮಿನೇಷನ್ ಆಗಸ್ಟ್ 23 ಕ್ಕೆ ನಡೆಯಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಅವರು ಗುರುವಾರ ಘೋಷಣೆ ಮಾಡಿದ್ದಾರೆ.
ಈ ಹಿಂದೆ ಪರೀಕ್ಷೆಯನ್ನು ಮೇ 17 ರಂದು ನಿಗದಿಪಡಿಸಲಾಗಿತ್ತು. ಆದರೆ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಘೋಷಣೆ ಮಾಡಲಾದ ಲಾಕ್ ಡೌನ್ ಪರಿಣಾಮವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.
JEE (main) ಪರೀಕ್ಷೆಯು ಜುಲೈ 18-23ಕ್ಕೆ ನಡೆಯಲಿದೆ ಎಂದು ಪೋಖ್ರಿಯಾಲ್ ಕೆಲದಿನಗಳ ಹಿಂದೆಯಷ್ಟೇ ಘೋಷಣೆ ಮಾಡಿದ್ದಾರೆ. ಈ ಮೂಲಕ 25 ಲಕ್ಷ ಅಭ್ಯರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಈ ಹಿಂದೆ JEE main 2020 ಪರೀಕ್ಷೆಯನ್ನು ಏಪ್ರಿಲ್ 5,7,8 ಮತ್ತು 11ಕ್ಕೆ ಮಾಡಬೇಕಾಗಿದ್ದ ಪರೀಕ್ಷೆಯನ್ನು ಮೇ ಕೊನೆಯ ವಾರಕ್ಕೆ ಮುಂದೂಡಿತು. ಇದೀಗ ಮತ್ತೆ ಅದನ್ನು ಮುಂದೂಡಲಾಗಿದೆ.
ಮಾರ್ಚ್ 16 ರ ಬಳಿಕ ದೇಶವ್ಯಾಪಿಯಾಗಿ ಲಾಕ್ಡೌನ್ ಘೋಷಣೆಯಾದ ಪರಿಣಾಮ ವಿಶ್ವವಿದ್ಯಾಲಯಗಳನ್ನು ಮತ್ತು ಶಾಲೆಗಳನ್ನು ಮುಚ್ಚಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.